ಡಾ.ಅಂಬೇಡ್ಕರ್​ ಜಯಂತಿ ಸರಳ ಆಚರಣೆ

Simple celebration of Dr. Ambedkar Jayanti
ಡಾ.ಬಿ.ಆರ್​. ಅಂಬೇಡ್ಕರ್​
Published on

ವಿಜಯಪುರ: ಲೋಕಸಭೆ ಚುನಾವಣೆ ಹಿನ್ನೆಲೆ ಭಾರತ ರತ್ನ ಡಾ.ಬಿ.ಆರ್​. ಅಂಬೇಡ್ಕರ್​ ಅವರ 133 ನೇ ಜಯಂತಿ ಆಚರಣೆಯನ್ನು ಸರಳವಾಗಿ ಆಚರಿಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪುಂಡಲಿಕ ಮಾನವರ ತಿಳಿಸಿದ್ದಾರೆ.

ನಗರದ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏ. 14 ರಂದು ಬೆಳಗ್ಗೆ 10ಕ್ಕೆ ಡಾ.ಬಾಬಾಸಾಹೇಬರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು.

ಅದಕ್ಕೂ ಮುನ್ನ 8 ಗಂಟೆಗೆ ಡಾ.ಬಿ.ಆರ್​. ಅಂಬೇಡ್ಕರ್​ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಗುವುದು. ಹೀಗಾಗಿ ಸಾರ್ವಜನಿಕರು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಎಲ್ಲ ಸಿಬ್ಬಂದಿ ಭಾಗವಹಿಸಬೇಕೆಂದು ಪುಂಡಲಿಕ ಮಾನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net