ಸರಳ ಪದಗಳಲ್ಲಿ ಕೀರ್ತನೆಗಳ ರಚಿಸಿದ ಕನಕದಾಸ: ಕೂಡ್ಲಿಗಿ ತಹಸೀಲ್ದಾರ್ ಎಸ್.ಮಹಾಬಲೇಶ್ವರ ಹೇಳಿಕೆ

031220 Kudligi Kanakadasa Jayanti
ಕೂಡ್ಲಿಗಿ ತಾಲೂಕು ಕಚೇರಿಯಲ್ಲಿ ಗುರುವಾರ ಕನಕದಾಸರ ಜಯಂತಿ ಆಚರಿಸಲಾಯಿತು.
Published on

ಕೂಡ್ಲಿಗಿ: ಕರ್ನಾಟಕ ಸಂಗೀತಕ್ಕೆ ಭಕ್ತ ಕನಕದಾಸರ ಕೊಡುಗೆ ಅಪಾರ ಎಂದು ತಹಸೀಲ್ದಾರ್ ಎಸ್.ಮಹಾಬಲೇಶ್ವರ ಹೇಳಿದರು. ಪಟ್ಟಣದ ತಾಲೂಕು ಕಚೇರಿಯಲ್ಲಿ ಗುರುವಾರ ತಾಲೂಕು ಆಡಳಿತ ಹಾಗೂ ಕುರುಬ ಸಮುದಾಯ ಏರ್ಪಡಿಸಿದ್ದ ಕನಕದಾಸರ ಜಯಂತಿಯಲ್ಲಿ ಮಾತನಾಡಿದರು. ಕನಕದಾಸರು ಕೀರ್ತನೆಗಳ ಮೂಲಕ ಜಾತಿ ವ್ಯವಸ್ಥೆ, ಮೌಢ್ಯತೆ ಹೋಗಲಾಡಿಸಲು ಅವಿರತವಾಗಿ ಶ್ರಮಿಸಿದರು. ಕನ್ನಡ ಭಾಷೆ ಅಭಿವೃದ್ಧಿಗೆ ಕನಕದಾಸರ ಕೊಡುಗೆ ಅಮೂಲ್ಯ. ಸರಳ ಪದಗಳಲ್ಲಿಯೇ ಸಾಮಾನ್ಯರಿಗೂ ಅರ್ಥವಾಗುವಂತೆ 316 ಕೀರ್ತನೆಗಳನ್ನು ರಚಿಸಿದ್ದಾರೆ. ಅಲ್ಲದೆ ಪುರಂದರದಾಸರ ಜತೆ ಸೇರಿ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳನ್ನು ಸಮಾಜಕ್ಕೆ ಕಾಣಿಕೆ ನೀಡಿದ್ದಾರೆ. ಅವರ ಜೀವನ ಮೌಲ್ಯಗಳು ಪ್ರಸ್ತುತ ಸಮಾಜಕ್ಕೆ ಅವಶ್ಯವಾಗಿದೆ ಎಂದರು.

ಸಮುದಾಯದ ಹಿರಿಯ ಮುಖಂಡ ಎಂ.ರಾಮಚಂದ್ರಪ್ಪ ಮಾತನಾಡಿದರು. ಸಮುದಾಯದ ತಾಲೂಕು ಅಧ್ಯಕ್ಷ ಬೊಪ್ಪಲಾಪುರ ಬಸವರಾಜ, ಉಪಾಧ್ಯಕ್ಷ ಉಮೇಶ, ಕುರಿ ಮತ್ತು ಉಣ್ಣೆ ನೇಕಾರ ಅಭಿವೃದ್ಧಿ ಸಂಘದ ಉಪಾಧ್ಯಕ್ಷ ಕೆ.ಜಿ.ನಾಗರಾಜ, ಜಿಲ್ಲಾ ಕುರುಬ ಸಂಘದ ನಿರ್ದೇಶಕ ಕೊಲ್ಕರ್ ಪ್ರಕಾಶ, ಬಿಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಕೆ.ಕನಕಪ್ಪ, ಅಂಜಿನಪ್ಪ, ಶಿವರಾಮಪ್ಪ, ಚಂದ್ರಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net