

ಬಸವನಬಾಗೇವಾಡಿ: ರಾಜ್ಯದಲ್ಲೇ ಅತಿ ಹೆಚ್ಚು ಕುರಿ, ಮೇಕೆ ಮಾರಾಟಕ್ಕೆ ಹೆಸರು ವಾಸಿಯಾದ ಪಟ್ಟಣದ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ರೈತರಿಗೆ ಅನುಕೂಲವಾಗುವ ಎಲ್ಲ ಮೂಲಸೌಲಭ್ಯಗಳನ್ನು ಒದಗಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ಪಟ್ಟಣದ ವಿಜಯಪುರ ರಸ್ತೆ ಪಕ್ಕದ ಎ.ಪಿ.ಎಂ.ಸಿ. ಮಾರುಕಟ್ಟೆಯಲ್ಲಿ 2023/24 ನೇ ಸಾಲಿನ ಆರ್.ಐ.ಡಿ,ಎ್&29 ಯೋಜನೆ ಅಡಿಯಲ್ಲಿ ಅಂದಾಜು 6 ಕೋಟಿ ರೂ. ವೆಚ್ಚದ ಕಾಂಕ್ರೀಟ್ (ಸಿ.ಸಿ) ರಸ್ತೆ, ಗೋದಾಮು ನಿರ್ಮಾಣ ಕಾಮಗಾರಿ ಶನಿವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ೇತ್ರದಲ್ಲಿ ಈಗಾಗಲೇ ಹಲವಾರು ಅಭಿವೃದ್ಧಿ ಕಾರ್ಯಗಳು ಕೈಗೊಳ್ಳಲಾಗಿದೆ. ಕೃಷ್ಣಾಮೇಲ್ದಡೆ ಯೋಜನೆಯಲ್ಲಿ ಬರುವ ಚಿಮ್ಮಲಗಿ, ಮುಳವಾಡ, ಗುತ್ತಿಬಸವಣ್ಣ ಸೇರಿ ಅನೇಕ ಏತ ನೀರಾವರಿ ಯೋಜನೆಗಳ ಕಾಮಗಾರಿ ಪ್ರಾರಂಭಿಸಲಾಗಿದೆ. ಇನ್ನೂ ಬರುವ ವರ್ಷದಲ್ಲಿ ರೈತರ ಜಮೀನುಗಳಿಗೆ ನೀರು ಹರಿಸುವ ಕಾರ್ಯ ಕೈಗೊಳ್ಳಲಾಗುವುದು ಎಂದು ಹೇಳಿದರು.
ಆಲಮಟ್ಟಿ ಜಲಾಶಯದಲ್ಲಿ ಸಂಗ್ರವಾಗುತ್ತಿರುವ ನೀರನ್ನು ಕಾಲುವೆಗಳ ಮೂಲಕ ಕೆರೆಗೆಳಿಗೆ ನೀರು ಹರಿಸಿದರೆ ಅಂತರ್ಜಲಮಟ್ಟ ಸುಧಾರಣೆಯಾಗಿ ರೈತರಿಗೆ ಅನುಕೂಲವಾಗುತ್ತದೆ. ಈ ಕುರಿತು ನೀರಾವರಿ ಸಚಿವ ಡಿ.ಕೆ.ಶಿವಕುಮಾರ, ನೀರಾವರಿ ಸಲಹಾ ಸಮಿತಿ ಅಧ್ಯ& ಸಚಿವ ಆರ್.ವಿ.ತಿಮ್ಮಾಪುರ ಅವರಿಗೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
ಸಹಕಾರಿ ಮಹಾಮಂಡಳಿ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ, ಪುರಸಭೆ ಮಾಜಿ ಸದಸ್ಯ ಕಮಲಸಾಬ ಕೊರಬು, ರವಿ ರಾಠೋಡ, ಬಸವರಾಜ ಕೋಟಿ, ಬಸವರಾಜ ರಾಯಗೊಂಡ, ಉದಯ ಮಾಂಗಲೇಕರ, ವಿಜಯಪುರ ಎ.ಪಿ.ಎಂ.ಸಿ. ಕಾರ್ಯದರ್ಶಿ ವಿ. ರಮೇಶ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನಾಗೇಂದ್ರಪ್ಪ, ಸಹಾಯಕ ಕಾರ್ಯದರ್ಶಿ ಐ.ಎಸ್. ಔರಂಗಬಾದ, ಎಸ್.ಡಿ. ಮನಗೂಳಿ, ಭೀಮು ನಿಡಗುಂದಿ, ನಾಗರಾಜ ಸೂಳಿಬಾವಿ, ಮಲ್ಲು ಬಿರಾದಾರ, ದಸಗೀರ ಬಾಗವಾನ, ಜಿ.ಎಂ.ಹಿರೇಮಠ ಇತರರಿದ್ದರು.