ಫಂಗಸ್ ಪೀಡಿತರಿಗೆ ಉಚಿತ ಚಿಕಿತ್ಸೆ ನೀಡಿ

snd-31-2
Published on

ಸಿಂದಗಿ: ಕೋವಿಡ್ ಮತ್ತು ಫಂಗಸ್ ಪೀಡಿತರಿಗೆ ಸರ್ಕಾರ ಉಚಿತ ಚಿಕಿತ್ಸೆ ನೀಡುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಶಾಖೆ ನೇತೃತ್ವದಲ್ಲಿ ಸೋಮವಾರ ತಹಸೀಲ್ದಾರ್ ಸಂಜೀವಕುಮಾರ ದಾಸರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ತಾಲೂಕು ಸಂಚಾಲಕ ಚಂದ್ರಕಾಂತ ಸಿಂಗೆ ಮಾತನಾಡಿ, ರಾಜ್ಯಾದ್ಯಂತ ಹೆಚ್ಚುತ್ತಿರುವ ದಲಿತರ ಮೇಲಿನ ದೌರ್ಜನ್ಯ ತಡೆಯಲು ರಾಜ್ಯ ಸರ್ಕಾರ ವಿಲವಾಗಿದೆ ಎಂದು ಆರೋಪಿಸಿದರು.

ಬಸವನಬಾಗೇವಾಡಿಯ ಅಪ್ರಾಪ್ತ ಬಾಲಕಿಯರ ಹತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಚಾಮರಾಜನಗರದಲ್ಲಿನ 37 ಕೋವಿಡ್ ರೋಗಿಗಳ ಸಾವಿಗೆ ಕಾರಣವಾದವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದರು.

ಪಡಿತರ ವ್ಯವಸ್ಥೆಯಲ್ಲಿನ ಆಹಾರ ಧಾನ್ಯಗಳ ಪ್ರಮಾಣ ಹೆಚ್ಚಿಸಬೇಕು. ಮೂರನೇ ಅಲೆಯನ್ನು ಸಮರ್ಥವಾಗಿ ಎದುರಿಸಲು ಅಗತ್ಯ ಕ್ರಮಗಳ ಜತೆಗೆ ಲಾಡ್ಜ್, ಭವನ ಮತ್ತು ಕಲ್ಯಾಣ ಮಂಟಪಗಳನ್ನು ಕೋವಿಡ್ ಕೇರ್ ಸೆಂಟರ್‌ಗಳಾಗಿ ಪರಿವರ್ತಿಸಬೇಕು. ರಾಜ್ಯದಲ್ಲಿ ದಲಿತ ಪ್ರಕರಣಗಳ ಕುರಿತು ಚರ್ಚಿಸಲು ದಲಿತ ಮುಖಂಡರ ಸಭೆ ಕರೆಯಬೇಕು ಎಂದು ಮನವಿ ಪತ್ರದ ಮೂಲಕ ಒತ್ತಾಯಿಸಿದರು. ಸಂಘಟನಾ ಸಂಚಾಲಕ ಪರಶುರಾಮ ಕಾಂಬಳೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net