ಸಿಂದಗಿ ಜೆಡಿಎಸ್​ ಶಾಸಕ ಎಂ‌ ಸಿ ಮನಗೂಳಿ ವಿಧಿವಶ

JDS MLA
Published on

ವಿಜಯಪುರ: ಜೆಡಿಎಸ್ ಹಿರಿಯ ಶಾಸಕ ಎಂ.ಸಿ. ಮನಗೂಳಿ ವಿಧಿವಶರಾಗಿದ್ದಾರೆ. ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ಒಂದು ಗಂಟೆ ಸುಮಾರಿಗೆ ನಿಧನರಾಗಿದ್ದಾರೆ.

ವಿಜಯಪುರ ಜಿಲ್ಲೆ ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ಅವರಿಗೆ 84 ವರ್ಷ ವಯಸ್ಸಾಗಿತ್ತು. 29.09.1936 ರಂದು ಮನಗೂಳಿಯಲ್ಲಿ ಜನಿಸಿದ್ದರು. ಕಳೆದ 15 ದಿನಗಳ ಹಿಂದೆ ಉಸಿರಾಟದ ಸಮಸ್ಯೆಯಿಂದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಸಾಕಷ್ಟು ಚಿಕಿತ್ಸೆ ನೀಡಿದ್ರೂ ಸಹ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ನಿಧನರಾಗಿದ್ದಾರೆ.

ಮನಗೂಳಿ ಅವರ ಪೂರ್ಣ ಹೆಸರು ಮಲ್ಲಪ್ಪ ಚೆನ್ನವೀರಪ್ಪ ಮನಗೂಳಿ. ಇವರ ಹುಟ್ಟೂರು ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ. ಮೃತರಿಗೆ ಪತ್ನಿ, ನಾಲ್ವರು ಗಂಡು ಮಕ್ಕಳು ಹಾಗೂ ಓರ್ವ ಪುತ್ರಿ ಇದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net