ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಪಕ್ಷ ಸಂಘಟಿಸಿ; ವಿಭಾಗೀಯ ಸಂಘಟನಾ ಕಾರ್ಯದರ್ಶಿ ಪೂಜಪ್ಪ ಸಲಹೆ

18052022 Sindhanoor bjp meetin
Published on


ಸಿಂಧನೂರು: ಮುಂಬರುವ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿಯೂ ಭಾರತೀಯ ಜನತಾ ಪಾರ್ಟಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯಕರ್ತರು ಬೂತ್ ಮಟ್ಟದಿಂದಲೇ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ಬಿಜೆಪಿ ಬಳ್ಳಾರಿ ವಿಭಾಗದ ಸಂಘಟನಾ ಕಾರ್ಯದರ್ಶಿ ಪೂಜಪ್ಪ ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಕಾರ್ಯಕಾರಿಣಿ ಸದಸ್ಯರ ಸಭೆ ಉದ್ಘಾಟಿಸಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಅನೇಕ ಜನಪರ ಯೋಜನೆಗಳು ಜನಮೆಚ್ಚುಗೆ ಪಡೆದಿವೆ. ಇಡೀ ವಿಶ್ವವೇ ಮೋದಿ ಆಡಳಿತವನ್ನು ಕೊಂಡಾಡುತ್ತಿವೆ ಎಂದರು.

ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರು ಉತ್ತಮ ಆಡಳಿತ ನಡೆಸುತ್ತಿದ್ದಾರೆ. ಹೀಗಾಗಿ ಬಿಜೆಪಿ ಕಾರ್ಯಕರ್ತರು ಬೂತ್ ಮಟ್ಟದಿಂದಲೇ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಮೂಲಕ ಪಕ್ಷ ಬಲವರ್ಧನೆಗೆ ದುಡಿಬೇಕೆಂದರು.

ನಗರ ಮಂಡಲದ ಅಧ್ಯಕ್ಷೆ ಪ್ರೇಮಾ ಸಿದ್ಧಾಂತಿಮಠ ಅಧ್ಯಕ್ಷತೆ ವಹಿಸಿದ್ದರು. ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮಧ್ವರಾಜ್ ಆಚಾರ್, ಜಿಪಂ ಮಾಜಿ ಸದಸ್ಯ ಎನ್.ಶಿವನಗೌಡ ಗೊರೇಬಾಳ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ, ಯುವ ಮೋರ್ಚಾ ರಾಜ್ಯ ಘಟಕದ ಕಾರ್ಯದರ್ಶಿ ಅಮರೇಶ ರೈತನಗರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶರಣಪ್ಪ ಗೌಡ ನಕ್ಕುಂದಿ, ಪ್ರಾಣೇಶ ದೇಶಪಾಂಡೆ, ಮುಖಂಡರಾದ ಶೈಲಜಾ ಷಡಾಕ್ಷರಪ್ಪ, ಮಂಜುನಾಥ ಹರಸೂರು, ರವಿ ರಾಥೋಡ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net