

ಸಿಂಧನೂರು: ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ನ.20 ರಂದು ಸ್ಥಳೀಯ ಸತ್ಯಾಗಾರ್ಡ್‌ನ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಕಾರ‌್ಯಕಾರಿಣಿ ಸದಸ್ಯ ಕೊಲ್ಲಾ ಶೇಷಗಿರಿರಾವ ತಿಳಿಸಿದರು.
ನಗರದ ಗಂಗಾವತಿ ರಸ್ತೆಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸಭೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಆಗಮಿಸುವ ನಿರೀಕ್ಷೆ ಇದೆ. ಆದರೆ ಇನ್ನೂ ಅಂತಿಮವಾಗಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ ಕಟೀಲ್ ಸೇರಿ ರಾಜ್ಯ ಮಟ್ಟದ ಎಲ್ಲ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಜತೆಗೆ ನೂತನ ಕೃಷಿ ಮಸೂದೆ ಸತ್ಯ ಮತ್ತು ಮಿಥ್ಯೆ ಕುರಿತು ಬಿಜೆಪಿ ರೈತ ಮೋರ್ಚಾದಿಂದ ಜನರಿಗೆ ತಿಳುವಳಿಕೆ ನೀಡಲಾಗುತ್ತಿದೆ ಎಂದರು.
ಜಿಪಂ ಸದಸ್ಯ ಎನ್.ಶಿವನಗೌಡ ಗೊರೇಬಾಳ, ಬಿಜೆಪಿ ತಾಲೂಕು ಅಧ್ಯಕ್ಷ ಹನುಮೇಶ ಸಾಲಗುಂದಾ, ನಗರ ಘಟಕದ ಅಧ್ಯಕ್ಷೆ ಪ್ರೇಮಾ ಸಿದ್ದಾಂತಿಮಠ, ಮುಖಂಡರಾದ ಮಧ್ವರಾಜ್ ಆಚಾರ್ಯ, ಹನುಮಂತರೆಡ್ಡಿ ಹುಡಾ ಇದ್ದರು.