ವಿಜಯವಾಣಿ, ದಿಗ್ವಿಜಯ ನ್ಯೂಸ್‌ನಿಂದ ರಕ್ತದಾನ ಶಿಬಿರ ಆಯೋಜನೆ

14062022 sindhanoor blood camp
Published on

ಸಿಂಧನೂರು: ಪಟ್ಟಣದ ಶ್ರೀ ಕನಕದಾಸ ಕಲ್ಯಾಣ ಮಂಟಪದಲ್ಲಿ ವಿಜಯವಾಣಿ, ದಿಗ್ವಿಜಯ ನ್ಯೂಜ್, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಶ್ರೀ ಬಸನಗೌಡ ಬಾದರ್ಲಿ ಫೌಂಡೇಷನ್(ಶ್ರೀಶಕ್ತಿ ರಕ್ತ ಭಂಡಾರ) ಹಾಗೂ ಶ್ರೀ ಕೆ.ವಿರೂಪಾಕ್ಷಪ್ಪ ಕೆ.ಕಮಲಮ್ಮ ಜನ ಕಲ್ಯಾಣ ಸಂಸ್ಥೆ ಮಂಗಳವಾರ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರ ಹಲವು ಸಮಾಜಮುಖಿ ಕಾರ್ಯಗಳಿಗೆ ಸಾಕ್ಷಿಯಾಯಿತು.

ಕರೊನಾದಿಂದಾಗಿ ಪತಿಯನ್ನು ಕಳೆದುಕೊಂಡ ಮಹಿಳೆಯರಿಗೆ ಹೊಲಿಗೆಯಂತ್ರ ನೀಡುವ ಮೂಲಕ ಗೃಹೋದ್ಯಮಕ್ಕೆ ಉತ್ತೇಜನ ನೀಡಲಾಯಿತು. ಪೌರಕಾರ್ಮಿಕ ಮಹಿಳೆಯರ ಆರೋಗ್ಯ ದೃಷ್ಟಿಯಿಂದ ವಿತರಣೆ ಮಾಡಿದ ಹೈಜೆನಿಕ್‌ಕಿಟ್ ಮಹಿಳಾ ಆರೋಗ್ಯ ಸುರಕ್ಷತೆ ಬಗ್ಗೆ ಸಂದೇಶ ನೀಡಿತು. ಕರೊನಾ ಮೂರನೆಯ ಅಲೆ ತಡೆಗೆ 10 ಮಾಸ್ಕ್‌ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಕೇಂದ್ರ ಬಿಂದುವಾಗಿದ್ದ ರಕ್ತದಾನ ಶಿಬಿರದಲ್ಲಿ ಯುವಕರು ಉತ್ಸಾಹದಿಂದಲೇ ಪಾಲ್ಗೊಂಡು ಕೈಜೋಡಿಸಿದರು. ವಿಜಯವಾಣಿ, ದಿಗ್ವಿಜಯ ನ್ಯೂಸ್ ಹಾಗೂ ವಿಆರ್‌ಎಲ್ ಸಮೂಹ ಸಂಸ್ಥೆಯ ನೌಕರರು ರಕ್ತದಾನ ಮಾಡಿದರು. ಈ ಕಾರ್ಯಕ್ರಮ ಸಮಾಜಕ್ಕೆ ಸಂದೇಶ ಸಾರುವ ಜತೆಗೆ ಇತರರಿಗೆ ಮಾದರಿಯಾಗುವ ಹಾಗೂ ಸಮಾಜಮುಖಿ ಕಾರ್ಯಕ್ಕೆ ಪ್ರೇರಣೆಯಾಗಿ ಹೊರಹೊಮ್ಮಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net