ಕಡ್ಡಾಯವಾಗಿ ಮಾಸ್ಕ್ ಧರಿಸಿ; ಪ್ರಧಾನ ಸಿವಿಲ್ ನ್ಯಾಯಾಧೀಶ ಶ್ರೇಯಾಂಸ ದೊಡ್ಡಮನಿ ಸಲಹೆ

27042021 Sindhanoor Corona Awareness Jatha,
Published on

ಸಿಂಧನೂರು: ಕರೊನಾದಿಂದ ಸಾವು, ನೋವು ಹೆಚ್ಚಾಗುತ್ತಿದ್ದು, ಇದರ ನಿಯಂತ್ರಣಕ್ಕಾಗಿ ಪ್ರತಿಯೊಬ್ಬರೂ ನಿಯಮ ಪಾಲಿಸಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಶ್ರೇಯಾಂಸ ದೊಡ್ಡಮನಿ ಹೇಳಿದರು.

ಕರೊನಾ 2ನೇ ಅಲೆ ನಿಯಂತ್ರಿಸಲು ನಗರದ ಪ್ರಮುಖ ರಸ್ತೆಗಳಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಮಂಗಳವಾರ ಏರ್ಪಡಿಸಿದ್ದ ಕರೊನಾ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸ್ಯಾನಿಟೈಸರ್ ಬಳಸಬೇಕು, ದೈಹಿಕ ಅಂತರ ಕಾಯ್ದುಕೊಳ್ಳಬೇಕು. ಅನಗತ್ಯವಾಗಿ ರಸ್ತೆಯಲ್ಲಿ ತಿರುಗಾಡಬಾರದು. ಸರ್ಕಾರ ನಿಗದಿ ಪಡಿಸಿದ ಸಮಯದಲ್ಲಿ ಅಗತ್ಯ ವಸ್ತುಗಳನ್ನು ಖರೀದಿ ಮಾಡಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬಾರದು. ಜೀವ ಉಳಿದರೆ ಜೀವನ ನಡೆಸಲು ಸಾಧ್ಯ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net