ಎಲ್ಲರಿಗೂ ಉಚಿತ ಲ್ಯಾಪ್‌ಟಾಪ್ ವಿತರಿಸಿ

22012020 Sindhanoor Students Protest
Published on

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ಒಕ್ಕೂಟ ಒತ್ತಾಯ | ಸಿಂಧನೂರು ತಹಸೀಲ್ದಾರ್‌ಗೆ ಮನವಿ

ಸಿಂಧನೂರು: 2017-18 ಮತ್ತು 2018-19ನೇ ಸಾಲಿನ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಿಸಬೇಕೆಂದು ಒತ್ತಾಯಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ಒಕ್ಕೂಟ ಬುಧವಾರ ಪ್ರತಿಭಟನೆ ನಡೆಸಿ, ತಹಸೀಲ್ದಾರ್‌ಗೆ ಮನವಿ ಸಲ್ಲಿಸಿತು.

2016-17ನೇ ಸಾಲಿನಲ್ಲಿ ಸರ್ಕಾರ ಜಾರಿಗೆ ತಂದ ಉಚಿತ ಲ್ಯಾಪ್‌ಟಾಪ್ ಯೋಜನೆಯ ಆದೇಶದಂತೆ ಸರ್ಕಾರಿ ಪದವಿ ಕಾಲೇಜ್‌ಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಗಿತ್ತು. ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡುವುದಾಗಿ ಅಂದಿನ ಸಿಎಂ ಸಿದ್ದರಾಮಯ್ಯ ಹಾಗೂ ಉನ್ನತ ಶಿಕ್ಷಣ ಸಚಿವರಾಗಿದ್ದ ಬಸವರಾಜ ರಾಯರಡ್ಡಿ ವಿಧಾನಸೌಧದಲ್ಲಿ ಸಾಂಕೇತಿಕವಾಗಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿ ಯೋಜನೆಗೆ ಚಾಲನೆ ನೀಡಿದ್ದರು.

ಇನ್ನು ಉಳಿದ ಲ್ಯಾಪ್‌ಟಾಪ್‌ಗಳನ್ನು ತಿಂಗಳಲ್ಲಿ ವಿತರಿಸಲಾಗುವುದು ಎಂದು ಹೇಳಿದ್ದರು. ಆದರೆ ಈವರೆಗೆ ವಿತರಿಸಿಲ್ಲ. ಈಗ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಮಾಡಲಾಗುತ್ತಿದೆ. ಆದ್ದರಿಂದ ವಿದ್ಯಾರ್ಥಿಗಳ ನಡುವೆ ಈ ತಾರತಮ್ಯ ಹೋಗಲಾಡಿಸಿ ಹಿಂದಿನ ವರ್ಷದಲ್ಲಿ ಪ್ರವೇಶ ಪಡೆದವರಿಗೂ ಯೋಜನೆ ಸೌಲಭ್ಯ ನೀಡುವಂತೆ ದ್ವಿತೀಯ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳ ಒಕ್ಕೂಟ ಆಗ್ರಹಿಸಿತು.

ವಿದ್ಯಾರ್ಥಿಗಳಾದ ಅಮರೇಶಪ್ಪ, ಗೌಡಪ್ಪ, ನಾಗರಾಜ್, ಮುತ್ತಣ್ಣ, ನರಸಣ್ಣ, ಸಂಜೀವ, ಪ್ರದೀಪ್, ಸದ್ದಾಮ್, ಮೋಹನ್, ಸಂಜೀವಮೂರ್ತಿ, ಮನೋಜ್, ಕುಮಾರ್, ವಿಶ್ವನಾಥ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net