ಗ್ರಾಪಂ ಆರ್ಥಿಕ ಬಲವರ್ಧನೆಗೆ ಕೊಡುಗೆ; ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಪ್ರತಿಪಾದನೆ

07122020 Sindhanoor Congress GP Meating
Published on

ಗ್ರಾಪಂ ಚುನಾವಣೆ ಪೂರ್ವಭಾವಿ ಸಭೆ

ಸಿಂಧನೂರು: ಗ್ರಾಪಂಗಳ ಆರ್ಥಿಕ ಬಲವರ್ಧನೆಗೆ ಕಾಂಗ್ರೆಸ್ ಕೊಡುಗೆ ಅಪಾರವಾಗಿದ್ದು, ಈ ಚುನಾವಣೆಯಲ್ಲಿ ಪಕ್ಷ ಬೆಂಬಲಿತ ಅಭ್ಯರ್ಥಿಗಳನ್ನು ಬೆಂಬಲಿಸಬೇಕೆಂದು ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ನಗರದ ರಾಯಚೂರು ರಸ್ತೆ ಮಾರ್ಗದಲ್ಲಿರುವ ಶ್ರೀ ಅನ್ನದಾನೇಶ್ವರ ಕಲ್ಯಾಣ ಮಂಟಪದಲ್ಲಿ ನಗರ ಹಾಗೂ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸೋಮವಾರ ಆಯೋಜಿಸಿದ್ದ ಗ್ರಾಪಂ ಚುನಾವಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯಾವುದೇ ಕಾರಣಕ್ಕೆ ಗ್ರಾಪಂಗಳು ಅತಂತ್ರ ಸ್ಥಿತಿಗೆ ಒಳಗಾಗುವಂತೆ ಮಾಡುವುದು ಬೇಡ. ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಿ ಅಭಿವೃದ್ಧಿಗೆ ಮುನ್ನುಡಿ ಬರೆಯಬೇಕೆಂದು ತಿಳಿಸಿದರು.

ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಮಾತನಾಡಿ, ಗ್ರಾಪಂಗಳು ಬಲಿಷ್ಠವಾಗಲು ಸ್ಪಷ್ಟ ಬಹುಮತ ಬೇಕು. ಅಭಿವೃದ್ಧಿಗೆ ಮತ ನೀಡುವುದಾದರೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಮತ ನೀಡಬೇಕು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಗ್ರಾಪಂಗಳು ಹೆಚ್ಚಿನ ಅನುದಾನ ಕಂಡಿವೆ ಎಂದರು.

ಮುಖಂಡ ಎಚ್.ಎನ್.ಬಡಿಗೇರ ಮಾತನಾಡಿದರು. ಆರ್‌ಡಿಸಿಸಿ ಬ್ಯಾಂಕ್ ಅಧ್ಯಕ್ಷ ಪಂಪನಗೌಡ ಬಾದರ್ಲಿ, ಜಿಪಂ ಸದಸ್ಯ ಬಸವರಾಜ ಹಿರೇಗೌಡ, ಲಿಂಗರಾಜ ಪಾಟೀಲ್ ರಾಗಲಪರ್ವಿ, ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್, ಎಂ.ರಂಗನಗೌಡ ಗೊರೇಬಾಳ, ನಗರಸಭೆ ಮಾಜಿ ಅಧ್ಯಕ್ಷ ಸೈಯ್ಯದ್ ಜಾಫರ ಜಹಗೀರದಾರ, ಆರ್.ರಾಜಶೇಖರ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾಜಿ ಮಲ್ಲಿಕ್ ವಕೀಲ, ಮಸ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪುರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net