ಕೋವಿಡ್ ಅಪಾಯ ಭತ್ಯೆ ನೀಡಿ; ಆರೋಗ್ಯ ಅಭಿಯಾನದಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಒತ್ತಾಯ

24052021 Sindhanoor MLA meet Contract Staff
Published on

ಶಾಸಕ ವೆಂಕಟರಾವ್ ನಾಡಗೌಡಗೆ ಮನವಿ

ಸಿಂಧನೂರು: ತಮಗೂ ಕೋವಿಡ್ ಅಪಾಯ ಭತ್ಯೆ ನೀಡಬೇಕೆಂದು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಸಿಬ್ಬಂದಿ ಒತ್ತಾಯಿಸಿದೆ.

ಶಾಸಕ ವೆಂಕಟರಾವ ನಾಡಗೌಡಗೆ ಸೋಮವಾರ ಮನವಿ ಸಲ್ಲಿಸಿದರು. ಆರೋಗ್ಯ ಅಭಿಯಾನದಡಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ಎಲ್ಲ ವೃಂದದ ಸಿಬ್ಬಂದಿ ಪ್ರಾಣದ ಹಂಗು ತೊರೆದು ದುಡಿಯುತ್ತಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಕೋವಿಡ್ ಭತ್ಯೆ ನೀಡಲು ಮನವಿ ಮಾಡಿದ್ದರೂ ಸ್ಪಂದನೆ ದೊರೆತಿಲ್ಲ ಎಂದು ಮನವಿಯಲ್ಲಿ ಅಳಲು ತೋಡಿಕೊಂಡಿದ್ದಾರೆ.

ಒಂದು ವಾರದಲ್ಲಿ ಕೋವಿಡ್ ಅಪಾಯ ಭತ್ಯೆ ಅನುದಾನ ಗುತ್ತಿಗೆ ನೌಕರರಿಗೆ ನೀಡಬೇಕು. ಇಲ್ಲದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಕೆ ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net