ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಿ- ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗಳಿಂದ ಪ್ರತಿಭಟನೆ

031122 Sindhanuru BCM Hostel Student Protest
ಸಿಂಧನೂರಿನ ಕುಷ್ಟಗಿ ರಸ್ತೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿರುವ ವಿವಿಧ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ತಾಲೂಕು ಆಡಳಿತಸೌಧ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು.
Published on

ಸಿಂಧನೂರು: ನಗರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿರುವ ವಿವಿಧ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಗುರುವಾರ ತಾಲೂಕು ಆಡಳಿತಸೌಧ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು.

ಹಾಸ್ಟೆಲ್‌ನಲ್ಲಿ ಸರಿಯಾಗಿ ಊಟ ನೀಡುತ್ತಿಲ್ಲ. ಅಡುಗೆ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ. ಇದನ್ನು ಪ್ರಶ್ನಿಸಿದರೆ ನಮ್ಮ ಮೇಲೆಯೇ ದೌರ್ಜನ್ಯ ಮಾಡುತ್ತಿದ್ದಾರೆ. ಶೌಚಗೃಹ ನಿರ್ವಹಣೆ ಇಲ್ಲವಾಗಿದೆ. ನಿಲಯದಲ್ಲಿ ಗ್ರಂಥಾಲಯ ಇಲ್ಲ ಸೌಲಭ್ಯ ಇಲ್ಲ. ಈ ಕುರಿತು ವಾರ್ಡನ್ ಲೋಕೇಶ್ ರಾಥೋಡ್ ಮತ್ತು ತಾಲೂಕು ಅಧಿಕಾರಿ ಲಿಂಗಪ್ಪ ಅಂಗಡಿ ಗಮನಕ್ಕೆ ತಂದರೂ ಸ್ಪಂದಿಸುತ್ತಿಲ್ಲ. ಕೂಡಲೇ ಸಮಸ್ಯೆ ಪರಿಹರಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದರು.

ಕಾಂಗ್ರೆಸ್ ಪಕ್ಷದ ಪ್ರಮುಖ ನಿರುಪಾದೆಪ್ಪ ಗುಡಿಹಾಳ ವಕೀಲ, ವಿದ್ಯಾರ್ಥಿಗಳಾದ ಆಂಜನೇಯ, ಭೀಮಣ್ಣ, ದಯಾನಂದ, ಬಸವರಾಜ, ಪರಶುರಾಮ, ಮಹಿಬೂಬ್, ದೇವರಾಜ, ಯಂಕೋಬ, ಬೀರಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net