ಖಾತ್ರಿ ಕಾಮಗಾರಿ ನಗರ ಪ್ರದೇಶಕ್ಕೆ ವಿಸ್ತರಿಸಿ

28032022 Sindhanoor workers protest
Published on


ಸಿಂಧನೂರು: ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ನೇತೃತ್ವದಲ್ಲಿ ನಗರದಲ್ಲಿ ಮೆರವಣಿಗೆ ನಡೆಸಿ ತಾಲೂಕು ಆಡಳಿತ ಸೌಧದ ಎದುರು ಸೋಮವಾರ ಧರಣಿ ನಡೆಸಲಾಯಿತು.

ಎಲ್ಲ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಖಾತ್ರಿಪಡಿಸಬೇಕು. ನರೇಗಾ ಯೋಜನೆಗೆ ಹೆಚ್ಚಿನ ಅನುದಾನ ನೀಡಿ ಯೋಜನೆಯನ್ನು ನಗರ ಪ್ರದೇಶಗಳಿಗೆ ವಿಸ್ತರಿಸಬೇಕು. ಅಂಗನವಾಡಿ, ಆಶಾ, ಬಿಸಿಯೂಟ ಮತ್ತು ಇತರ ಸ್ಕೀಂ ವರ್ಕರ್‌ಗಳಿಗೆ ಶಾಸನಬದ್ದ ಕನಿಷ್ಠ ವೇತನ ನೀಡುವುದರ ಜತೆಗೆ ಸಾಮಾಜಿಕ ಭದ್ರತೆ ಖಾತ್ರಿಪಡಿಸಬೇಕು ಎಂದು ಒತ್ತಾಯಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net