ಶೈಕ್ಷಣಿಕ ಅಭಿವೃದ್ಧಿಗೆ ಸರ್ಕಾರ ಆದ್ಯತೆ

31072022 sindhanoor dining hall opening
Published on

ತಾಪಂ ಇಒ ಲಕ್ಷ್ಮೀದೇವಿ ಗುರಿಕಾರ ಹೇಳಿಕೆ ಅಲಬನೂರು ಶಾಲೆಯಲ್ಲಿ ಭೋಜನಾಲಯ ಉದ್ಘಾಟನೆ

ಸಿಂಧನೂರು: ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದ್ದು, ವಿದ್ಯಾರ್ಥಿಗಳು ಅವುಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಸ್ಥಾನಕ್ಕೇರಬೇಕು ಎಂದು ತಾಪಂ ಇಒ ಲಕ್ಷ್ಮೀದೇವಿ ಗುರಿಕಾರ ಹೇಳಿದರು.

ತಾಲೂಕಿನ ಅಲಬನೂರು ಗ್ರಾಮದ ಶ್ರೀ ವಳಬಳ್ಳಾರಿ ಚನ್ನಬಸವೇಶ್ವರ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಗ್ರಾಪಂನಿಂದ ನಿರ್ಮಿಸಲಾದ ಭೋಜನಾಲಯವನ್ನು ಶನಿವಾರ ಉದ್ಘಾಟಿಸಿ ಮಾತನಾಡಿ, ನಾವು ಪ್ರಾಥಮಿಕ, ಪ್ರೌಢಶಿಕ್ಷಣ ಪಡೆಯುವಾಗ ಇಷ್ಟೊಂದು ಸೌಲಭ್ಯಗಳಿರಲಿಲ್ಲ. ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದರು.

ಸಿಂಧನೂರು ತಾಲೂಕು ಶೈಕ್ಷಣಿಕವಾಗಿ ವೇಗವಾಗಿ ಪ್ರಗತಿ ಕಾಣುತ್ತಿದೆ. ಕಲ್ಯಾಣ ಕರ್ನಾಟಕದವರು ಎನ್ನುವ ಕೀಳರಿಮೆಯಿಂದ ಹೊರಬರಬೇಕಿದೆ. ನಮ್ಮಲ್ಲೂ ಪ್ರತಿಭೆಗಳಿವೆ. ದೊಡ್ಡ ಗುರಿಯೊಂದಿಗೆ ಸಿಗುವ ಅವಕಾಶಗಳನ್ನು ಬಳಸಿಕೊಂಡು ಮುನ್ನಡೆದರೆ ಯಶಸ್ಸು ನಮ್ಮದಾಗುತ್ತದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net