ಆಯಷ್ಮಾನ್ ಭಾರತ ಆರೋಗ್ಯ ಕಾರ್ಡ್ ಪಡೆದುಕೊಳ್ಳಿ; ಡಾ.ಶ್ರೀದೇವಿ ಸಲಹೆ; ನೋಂದಣಿ ಅಭಿಯಾನ

14092022 Sindhanoor Aushman card
Published on

ಸಿಂಧನೂರು; ಪ್ರತಿಯೊಬ್ಬರೂ ಸರ್ಕಾರದ ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್ ಪಡೆದುಕೊಳ್ಳುವ ಮೂಲಕ ಚಿಕಿತ್ಸೆಗೆ ಉಪಯೋಗಿಸಿಕೊಳ್ಳಬೇಕೆಂದು ನಗರದ ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಶ್ರೀದೇವಿ ಹೇಳಿದರು.

ತಾಲೂಕಿನ ಗುಂಜಳ್ಳಿ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಪಂ, ಆರೋಗ್ಯ ಇಲಾಖೆಯಿಂದ ಆಯೋಜಿಸಿದ್ದ ಆರೋಗ್ಯ ಮೇಳ ಮತ್ತು ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ್ ನೋಂದಣಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪಿಎಚ್‌ಸಿಒ ಜಯಲಕ್ಷ್ಮೀ ಮಾತನಾಡಿ, ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್ ಮೂಲಕ ಬಡವರು, ನಿರ್ಗತಿಕರು ಹೆಚ್ಚಿನ ಚಿಕಿತ್ಸೆ ಪಡೆದುಕೊಳ್ಳಲು ಅನುಕೂಲವಾಗಿದೆ. ಪೌಷ್ಟಿಕ ಆಹಾರ ಸೇವನೆ ಮೂಲ ಉತ್ತಮ ಆರೋಗ್ಯ ಹೊಂದಬೇಕೆಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net