ರಸಗೊಬ್ಬರ ಬೆಲೆ ಏರಿಕೆ ನಿಯಂತ್ರಿಸಲು ಕರ್ನಾಟಕ ರೈತ ಸಂಘ ತಾಲೂಕು ಸಮಿತಿ ಮನವಿ

Sindhanuru Karnataka Raitha Sangha Appeal
ರಸಗೊಬ್ಬರ ಬೆಲೆ ಏರಿಕೆ ನಿಯಂತ್ರಿಸಲು ಒತ್ತಾಯಿಸಿ ಸಿಂಧನೂರಿನಲ್ಲಿ ಕರ್ನಾಟಕ ರೈತ ಸಂಘ ತಾಲೂಕು ಸಮಿತಿ ಶಿರಸ್ತೇದಾರ ಅಂಬಾದಾಸಗೆ ಬುಧವಾರ ಮನವಿ ಸಲ್ಲಿಸಿತು.
Published on

ಸಿಂಧನೂರು: ರಸಗೊಬ್ಬರ ಬೆಲೆ ಏರಿಕೆ ನಿಯಂತ್ರಿಸಲು ಒತ್ತಾಯಿಸಿ ಕರ್ನಾಟಕ ರೈತ ಸಂಘ ತಾಲೂಕು ಸಮಿತಿ ತಹಸಿಲ್ ಶಿರಸ್ತೇದಾರ ಅಂಬಾದಾಸರಿಗೆ ಬುಧವಾರ ಮನವಿ ಸಲ್ಲಿಸಿತು.

ಕೇಂದ್ರ ಸರ್ಕಾರ ಏಕಾಏಕಿ ರಸಗೊಬ್ಬರ ಬೆಲೆ ಏರಿಕೆ ಮಾಡಿರುವುದು ಸರಿಯಾದ ಕ್ರಮವಲ್ಲ. ಈಗಾಗಲೇ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆ ಮೂಲಕ ಜನರು ಮತ್ತು ರೈತರು ಹೆಚ್ಚಿನ ತೊಂದರೆ ಅನುಭವಿಸುತ್ತಿದ್ದಾರೆ. ಮುಂಗಾರು ಹಂಗಾಮು ಆರಂಭವಾಗಿದ್ದು, ರೈತರಿಗೆ ರಸಗೊಬ್ಬರದ ಅಗತ್ಯ ಇದೆ. ಇದನ್ನು ಅರಿತು ಬೆಲೆ ಏರಿಕೆ ಮಾಡಿದ್ದು ಸಲ್ಲ. ರೈತರ ಅಭಿವೃದ್ಧಿ ಮಾಡುವುದಾಗಿ ಹೇಳುವ ಸರ್ಕಾರ ರೈತರಿಗೆ ಅಗತ್ಯವಾದ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ. ಕೂಡಲೇ ರಸಗೊಬ್ಬರ ಬೆಲೆ ಇಳಿಸಲು ಕ್ರಮಕೈಗೊಳ್ಳಬೇಕು. ಜತೆಗೆ ಜಿಲ್ಲೆಯಲ್ಲಿ ಅಕ್ರಮ ಪಡಿತರ ಮಾರಾಟ ಜಾಲ ಇದ್ದು, ಪಡಿತರ ಸಾಗಣೆದಾರರ ವಿರುದ್ಧ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದ ರೈತ ಸಂಘ ಮನವಿಯಲ್ಲಿ ಒತ್ತಾಯಿಸಿದೆ. ತಾಲೂಕು ಸಮಿತಿಯ ಪದಾಧಿಕಾರಿಗಳಾದ ಅಶೋಕ ನಿಲೋಗಲ್, ಬಸವರಾಜ, ಬಾಲಸ್ವಾಮಿ, ಅಮರೇಶ, ರಾಜಶೇಖರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net