

ಸಿಂಧನೂರು: ಮಹಿಳೆಯರು ಕ್ರೀಡಾಸಕ್ತಿ ಬೆಳೆಸಿಕೊಳ್ಳಬೇಕಿದ್ದು, ಇದರಿಂದ ಅನುಕೂಲವಿದೆ. ದಸರಾ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಕ್ರೀಡಾಕೂಟ ಆಯೋಜಿಸಿರುವುದು ಸ್ವಾಗತಾರ್ಹ ಎಂದು ಮಾಜಿ ಸಚಿವ ಹಾಗೂ ಕೆಒಎಫ್ ಅಧ್ಯಕ್ಷ ವೆಂಕಟರಾವ ನಾಡಗೌಡ ಹೇಳಿದರು.
ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯ ಮೈದಾನದಲ್ಲಿ ದಸರಾ ಅಂಗವಾಗಿ ಮಹಿಳೆಯರಿಗಾಗಿ ಆಯೋಜಿಸಿದ್ದ ಕಬಡ್ಡಿ, ಖೋಖೊ, ಥ್ರೋಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ಶನಿವಾರ ಮಾತನಾಡಿದರು. ಕ್ರೀಡಾಕೂಟದಲ್ಲಿ ಅನೇಕ ಮಹಿಳೆಯರು ಸಾಧನೆ ಮಾಡಿದ್ದಾರೆ. ವರ್ಷಕ್ಕೊಮ್ಮೆ ಉತ್ಸವದ ಹೆಸರಿನಲ್ಲಿ ಮಹಿಳೆಯರು ಕ್ರೀಡಾಕೂಟ ಹಾಗೂ ಮನರಂಜನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದರು.