ನಿರುದ್ಯೋಗಿಗಳಿಗೆ ಉದ್ಯೋಗ ಮೇಳ ಸಹಕಾರಿ; ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಹೇಳಿಕೆ

14052022 Sindhanoor UdyogaMela
Published on

ಸಿಂಧನೂರು: ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ಮೇಳ ಸಹಕಾರಿಯಾಗಿದೆ ಎಂದು ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ನಗರದ ಆನಂದ ಪಬ್ಲಿಕ್ ಶಾಲೆಯಲ್ಲಿ ಖಾಸಗಿ ಶಾಲಾ-ಕಾಲೇಜು ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟದಿಂದ ಶನಿವಾರ ಹಮ್ಮಿಕೊಂಡಿದ್ದ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದರು. ಪ್ರತಿ ವರ್ಷ ಪದವಿ ಮತ್ತು ಸ್ನಾತಕೋತ್ತರ ಪದವಿ ಮುಗಿಸಿ ಸಾವಿರಾರು ವಿದ್ಯಾರ್ಥಿಗಳು ಹೊರ ಬರುತ್ತಿದ್ದಾರೆ. ಆದರೆ ಸೂಕ್ತ ಉದ್ಯೋಗ ದೊರಕದೆ ನಿರುದ್ಯೋಗಿಗಳಾಗುತ್ತಿದ್ದಾರೆ. ಇದನ್ನು ಅರಿತು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಅಂಥವರಿಗೆ ಉದ್ಯೋಗ ನೀಡುವ ಉದ್ದೇಶದಿಂದ ಮೇಳ ಆಯೋಜಿಸಿರುವುದು ಶ್ಲಾಘನೀಯ ಎಂದರು.

ಖಾಸಗಿ ಶಾಲಾ ಮತ್ತು ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟದ ಅಧ್ಯಕ್ಷ ವೈ.ನರೇಂದ್ರನಾಥ ಮಾತನಾಡಿ, ತಾಲೂಕಿನ ಶಿಕ್ಷಣ ಸಂಸ್ಥೆಯಲ್ಲಿರುವ ಶಿಕ್ಷಕರ ಹುದ್ದೆಗಳಿಗೆ ಉದ್ಯೋಗ ಮೇಳದ ಮೂಲಕ ಆಯ್ಕೆ ನಡೆಯಲಿದೆ. ಈ ಮೇಳದಿಂದ ಹೆಚ್ಚಿನ ಅನಕೂಲವಿದ್ದು ಈ ರೀತಿಯ ಉದ್ಯೋಗ ಮೇಳ ತಾಲೂಕಿನಿಂದಲೇ ಮೊದಲ ಬಾರಿಗೆ ನಡೆಯುತ್ತಿ ಎಂದು ತಿಳಿಸಿದರು.

ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ, ಒಕ್ಕೂಟದ ಜಿಲ್ಲಾಧ್ಯಕ್ಷ ಬಸವರಾಜ ಮಾತನಾಡಿದರು. ಖಾಸಗಿ ಶಾಲಾ ಮತ್ತು ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟದ ಗೌರವಾಧ್ಯಕ್ಷ ಮಲ್ಲನಗೌಡ ಕಾನಿಹಾಳ, ಪ್ರಧಾನ ಕಾರ್ಯದರ್ಶಿ ವೀರೇಶ ಅಗ್ನಿ, ಆನಂದ ಪಬ್ಲಿಕ್ ಶಾಲೆಯ ಅಧ್ಯಕ್ಷ ಗೌತಮ್ ಮೆಹ್ತಾ, ವಿಸ್ಡಮ್ ಕಾಲೇಜು ಪ್ರಾಚಾರ್ಯ ಅನಿಲಕುಮಾರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net