ಗ್ಯಾರಂಟಿಗಾಗಿ ತಾಲೂಕು ಮಟ್ಟದ ಸಮಿತಿ

Untitled design(1)
Published on

ಸಿಂಧನೂರು: ನಗರದ ತಾಪಂ ಸಭಾಂಗಣದಲ್ಲಿ ಬುಧವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ವೈ. ಅನಿಲಕುಮಾರ ಅಧ್ಯಕ್ಷತೆಯಲ್ಲಿ ಪಂಚ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ನಡೆಯಿತು.

ತಾಪಂ ಇಒ ಚಂದ್ರಶೇಖರ ಮಾತನಾಡಿ, ಗ್ಯಾರಂಟಿ ಪರಿಣಾಮಕಾರಿ ಅನುಷ್ಠಾನ ಹಾಗೂ ಮೇಲ್ವಿಚಾರಣೆಗಾಗಿ ತಾಲೂಕು ಮಟ್ಟದ ಸಮಿತಿ ರಚಿಸಲಾಗಿದೆ. ಸರ್ಕಾರದ ಐದು ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದೆ ಎಂದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ವೈ.ಅನಿಲಕುಮಾರ ಮಾತನಾಡಿ, ಗೃಹಲಕ್ಷ್ಮಿಯೋಜನೆಗೆ 72395 ನೋಂದಣಿ ಮಾಡಿಸಿಕೊಂಡಿದ್ದು, ಈ ಪೈಕಿ 72041 ಅರ್ಜಿದಾರರಿಗೆ ಹಣ ಜಮೆಯಾಗಿದೆ. 354 ಜನರಿಗೆ ತಾಂತ್ರಿಕ ದೋಷದಿಂದ ಜಮೆಯಾಗಿಲ್ಲ. ಯುವನಿಧಿ ಯೋಜನೆಗೆ ತಾಲೂಕಿನಲ್ಲಿ ಒಟ್ಟು 18329 ಪದವೀಧರರಿದ್ದಾರೆ. 1,23,34500 ರೂ. ಹಣ ಜಮಾವಣೆಯಾಗಿದೆ. ಅನ್ನಭಾಗ್ಯ, ಗೃಹಜ್ಯೋತಿ ಯೋಜನೆಯಲ್ಲಿಯೂ ಪ್ರಗತಿ ಸಾಧಿಸಲಾಗಿದೆಂದು ವಿವರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net