ಪಾಲಕರು ಮಕ್ಕಳನ್ನು ವಿದ್ಯಾವಂತರನ್ನಾಗಿಸಲಿ

Sindhanour student sanmana
ಸಿಂಧನೂರಿನ ಶ್ರೀಗುರು ನಂಜುಂಡೇಶ್ವರ ಗುರುವಿನ ಮಠದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಮುಖ್ಯಶಿಕ್ಷಕ ಚಿದಾನಂದಯ್ಯ ಗುರುವಿನ್, ಮಾದಯ್ಯ ಗುರುವಿನ್, ಮಂಜುನಾಥ ಗುರುವಿನ್ ಸಾನಿಧ್ಯವಹಿಸಿದ್ದರು. ಕನಕ ಸಂಸ್ಕಾರ ಬಳಗದ ಅಧ್ಯಕ್ಷ ಬಿ.ಹನುಮೇಶ, ಪ್ರಧಾನ ಕಾರ್ಯದರ್ಶಿ ಬಸವರಾಜ ಭಂಗಿ ಇತರರಿದ್ದರು.
Published on

ಸಿಂಧನೂರು: ಯಾವುದೇ ಸಮಾಜದ ಏಳಿಗೆಗೆ ಶೈಕ್ಷಣಿಕ ಅಭಿವೃದ್ಧಿ ಬಹುಮುಖ್ಯವಾಗಿದೆ ಎಂದು ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಹೇಳಿದರು.

ನಗರದ ಸುಕಾಲಪೇಟೆಯ ಶ್ರೀಗುರು ನಂಜುಂಡೇಶ್ವರ ಗುರುವಿನಮಠದಲ್ಲಿ ಕನಕ ಸಂಸ್ಕಾರ ಬಳಗ ಚಾರಿಟಬಲ್ ಟ್ರಸ್ಟ್‌ನಿಂದ ಭಾನುವಾರ ಹಾಲುಮತ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ಸರಕಾರಿ ನೌಕರರಿಗೆ, ನಿವೃತ್ತ ನೌಕರರಿಗೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪಾಲಕರು ಮಕ್ಕಳನ್ನು ವಿದ್ಯಾವಂತರನ್ನಾಗಿಸಬೇಕು. ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸುವಂತೆ ನಿರಂತರ ಹೋರಾಟ ನಡೆದಿದೆ. ಸರ್ಕಾರ ಮೀಸಲಾತಿ ನೀಡಿದರೆ ಅನುಕೂಲವಾಗುತ್ತದೆ ಎಂದರು.

ರಾಜ್ಯ ರೈತ ಸಂಘ ಹಸಿರು ಸೇನೆಯ ಗೌರವ ಅಧ್ಯಕ್ಷ ಬಸವರಾಜ ಗೋಡಿಹಾಳ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ನಾಗವೇಣಿ ಪಾಟೀಲ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಡಿ.ಎಚ್.ಕಂಬಳಿ, ನಗರಸಭೆ ಸದಸ್ಯೆ ಲಕ್ಷ್ಮೀ ತಿಮ್ಮಯ್ಯ ಭಂಗಿ, ಮಾಜಿ ಯೋಧ ವೀರೇಶ ಯಾದವ್, ನಾರಾಯಣಪ್ಪ ಕಿಲ್ಲೇದ, ಶರಣಪ್ಪ ಮಳ್ಳಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net