

ಸಿಂಧನೂರು, ಪಡಿತರ ಅಕ್ಕಿ ಅಕ್ರಮ ಸಾಗಣೆ, ಲಾರಿ ಜಪ್ತಿ,
Sindhanur, illegal transportation of ration rice, lorry seized,
ಸಿಂಧನೂರು: ತಾಲೂಕಿನ ಶ್ರೀಪುರಂ ಜಂಕ್ಷನ್‌ನ ತಾಯಮ್ಮ ಗುಡಿ ಹತ್ತಿರ ಲಾರಿಯಲ್ಲಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಪಡಿತರ ಅಕ್ಕಿಯನ್ನು ಗ್ರಾಮೀಣ ಠಾಣೆ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.
ಸಿರಗುಪ್ಪ ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಜನರು ನ್ಯಾಯಬೆಲೆ ಅಂಗಡಿಯಿಂದ ತಂದ ಅಕ್ಕಿಯನ್ನು 15 ರೂ.ಗೆ ಕೆಜಿಯಂತೆ ಪಡೆದು ಸಿಂಧನೂರು ಮಾರ್ಗವಾಗಿ ಬೇರೆ ಕಡೆಗೆ ಅಕ್ರಮವಾಗಿ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. 7.80 ಲಕ್ಷ ರೂ. ಮೌಲ್ಯದ 50 ಕೆಜಿಯ 650 ಚೀಲದಲ್ಲಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ವಶಕ್ಕೆ ಪಡೆದು, ಆರೋಪಿತರ ವಿರುದ್ಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.