ಸಿಂಧನೂರಿನಲ್ಲಿ ಇರುಮುಡಿ ಪೂಜೆ

8SND-07
Published on

ಸಿಂಧನೂರು: ವಾಸವಿನಗರದಲ್ಲಿರುವ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಶನಿವಾರ ಇರುಮುಡಿ ಪೂಜೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು. ಬೆಳಗ್ಗೆಯಿಂದ ಅಯ್ಯಪ್ಪಸ್ವಾಮಿಗೆ ವಿಶೇಷ ಪೂಜೆ ನೆರೆವೇರಿಸಲಾಯಿತು. ಶಬರಿಮಲೆಗೆ ತೆರಳುವ ನೂರಾರು ಮಾಲಾಧಾರಿಗಳು ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಮತ್ತು ತುಪ್ಪದ ಪೂಜೆ ಸಲ್ಲಿಸಿದರು. ಕೆಪಿಸಿಸಿ ಮಾಜಿ ಕಾರ್ಯದರ್ಶಿ ಕೆ.ಕರಿಯಪ್ಪ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಇರುಮುಡಿ ಪೂಜೆ ನಿಮಿತ್ತ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net