ಉತ್ತಮ ಆರೋಗ್ಯಕ್ಕೆ ಕ್ರೀಡೆ ಅಗತ್ಯ; ಜೆಡಿಎಸ್ ತಾಲೂಕು ಅಧ್ಯಕ್ಷ ಬಸವರಾಜ ನಾಡಗೌಡ ಹೇಳಿಕೆ

25092022 sindhanoor taluk sports
Published on

ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಕ್ರೀಡಾಕೂಟ

ಸಿಂಧನೂರು: ಪ್ರತಿಯೊಬ್ಬರೂ ಚಟುವಟಿಕೆಯಿಂದ ಇರಬೇಕು. ಉತ್ತಮ ಆರೋಗ್ಯಕ್ಕೆ ಕ್ರೀಡೆ ಹಾಗೂ ನಡಿಗೆಯಲ್ಲಿ ತೊಡಗಿಕೊಳ್ಳಬೇಕೆಂದು ಜೆಡಿಎಸ್ ತಾಲೂಕು ಅಧ್ಯಕ್ಷ ಬಸವರಾಜ ನಾಡಗೌಡ ಹೇಳಿದರು.

ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ವಿಸಿಬಿ ಪದವಿ ಪೂರ್ವ ಕಾಲೇಜ್ ಸಹಯೋಗದಲ್ಲಿ ಶನಿವಾರ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ದಿನದ ಕೆಲವು ಗಂಟೆಗಳಾದರೂ ಕ್ರೀಡೆಯಲ್ಲಿ ತೊಡಗಿಕೊಳ್ಳಬೇಕು. ಉತ್ತಮ ಆರೋಗ್ಯಕ್ಕೆ ಕ್ರೀಡೆ ಬಹುಮುಖ್ಯವಾಗಿದೆ ಎಂದರು.

ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಾಜಶೇಖರ ಪಟ್ಟಣಶೆಟ್ಟಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಕ್ರೀಡಾಕೂಟಗಳು ಸ್ಫೂರ್ತಿದಾಯಕವಾಗಿದ್ದು, ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಮನೋಭಾವ ಹೆಚ್ಚಬೇಕು. ಕ್ರೀಡೆಗಳಲ್ಲಿ ಸೋಲು, ಗೆಲುವನ್ನು ಸಮನಾಗಿ ಸ್ವೀಕರಿಸಬೇಕು. ತೀರ್ಪುಗಾರರ ತೀರ್ಪನ್ನು ಗೌರವಿಸುವ ಕಾರ್ಯವನ್ನು ಎಲ್ಲರೂ ಮಾಡಬೇಕು ಎಂದರು.
ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜ್ ಪ್ರಾಚಾರ್ಯ ಎಸ್.ಶಿವರಾಜ್ ಮಾತನಾಡಿ, ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ದೈಹಿಕ ಶಿಕ್ಷಣ ಉಪನ್ಯಾಸಕರ ಕೊರತೆ ಇರುವುದರಿಂದ ಕ್ರೀಡಾಕೂಟಗಳಿಗೆ ಸಮಸ್ಯೆಯಾಗುತ್ತಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net