ಕನ್ನಡ ಜ್ಯೋತಿ ರಥಯಾತ್ರೆಗೆ ಅದ್ದೂರಿ ಸ್ವಾಗತ

Untitled design (3)
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಯಾತ್ರೆಯ ಮೆರವಣಿಗೆ ಸಿಂಧನೂರಿನಲ್ಲಿ ಶುಕ್ರವಾರ ನಡೆಯಿತು ತಹಸೀಲ್ದಾರ್ ಅರುಣ್ ದೇಸಾಯಿ, ಕನ್ನಡ ಸಾಹಿತ್ಯ ಪರಿಷತ್ ತಾಲೂಕಾಧ್ಯಕ್ಷ ಪಂಪಯ್ಯಸ್ವಾಮಿ ಸಾಲಿಮಠ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ, ಕರ್ನಾಟಕ ರಕ್ಷಣಾ ವೇದಿಕೆ (ಟಿ.ನಾರಾಯಣಗೌಡ ಬಣ) ಜಿಲ್ಲಾಧ್ಯಕ್ಷ ಗಂಗಣ್ಣ ಡಿಶ್ ಇತರರಿದ್ದರು.
Published on

ಸಿಂಧನೂರು: ಮಂಡ್ಯದಲ್ಲಿ ಡಿ.20,21,22ರಂದು ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಮ್ಮಿಕೊಂಡಿರುವ ಕನ್ನಡ ಜ್ಯೋತಿ ರಥಯಾತ್ರೆಯನ್ನು ನಗರದಲ್ಲಿ ತಾಲೂಕಾಡಳಿತ ಹಾಗೂ ಕನ್ನಡಪರ ಸಂಘಟನೆಗಳಿಂದ ಶುಕ್ರವಾರ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದಿಂದ ನಗರದಲ್ಲಿ ಸ್ವಾಗತಿಸಿ, ತಹಸಿಲ್ ಕಚೇರಿಯಿಂದ ಮೆರವಣಿಗೆ ನಡೆಸಲಾಯಿತು. ಬಳಿಕ ಪ್ರಮುಖರು ಕನ್ನಡ ಜ್ಯೋತಿ ರಥಯಾತ್ರೆಯನು ್ನಬೀಳ್ಕೊಟ್ಟರು.

ತಹಸೀಲ್ದಾರ್ ಅರುಣ್ ದೇಸಾಯಿ, ಕನ್ನಡ ಸಾಹಿತ್ಯ ಪರಿಷತ್ ತಾಲೂಕಾಧ್ಯಕ್ಷ ಪಂಪಯ್ಯಸ್ವಾಮಿ ಸಾಲಿಮಠ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ, ಕರ್ನಾಟಕ ರಕ್ಷಣಾ ವೇದಿಕೆ (ಟಿ.ನಾರಾಯಣಗೌಡ ಬಣ) ಜಿಲ್ಲಾಧ್ಯಕ್ಷ ಗಂಗಣ್ಣ ಡಿಶ್, ಸರಕಾರಿ ನೌಕರರ ಸಂಘದ ಅಧ್ಯಕ್ಷ ತಾಲೂಕಾಧ್ಯಕ್ಷ ಚಂದ್ರಶೇಖರ ಹಿರೇಮಠ, ಪ್ರಮುಖರಾದ ಎನ್.ಶಿವನಗೌಡ ಗೊರೇಬಾಳ, ಹುಸೇನಪ್ಪ ಅಮರಾಪುರ, ಶಂಕರದೇವರು ಹಿರೇಮಠ, ದಾವಲಸಾಬ ದೊಡ್ಡಮನಿ, ಸುರೇಶ ಕಟ್ಟಿಮನಿ, ಮೌನೇಶ ದೊರೆ, ಲಕ್ಷ್ಮೀ ಪತ್ತಾರ, ರಮಾದೇವಿ ಶಂಭೋಜಿ,ರಂಗನಾಥ ಗುಡಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net