ಶಿಕ್ಷಣದಿಂದ ಅಭಿವೃದ್ಧಿ ಹೊಂದಲು ಸಾಧ್ಯ

snd-1
ಸಿಂಧನೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತ ಜನಜಾಗೃತಿ ವಾಹನಕ್ಕೆ ಸಿವಿಲ್ ಪ್ರಧಾನ ನ್ಯಾಯಾಧೀಶೆ ರೂಪಾ ಸಿ.ವಗ್ಗ ಚಾಲನೆ ನೀಡಿದರು. ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಸರಸ್ವತಿ ಒಟೆಕರ್, ವಕೀಲರ ಸಂಘದ ಅಧ್ಯಕ್ಷ ಎನ್.ರಾಮನಗೌಡ, ವಕೀಲರಾದ ಉರುಕುಂದಪ್ಪ ಎಸ್.ಎಚ್., ಪಿ. ಖಾದ್ರಿ, ಯು. ಬಸವಂತರಾಜ, ಹನುಮಂತಪ್ಪ ಇತರರಿದ್ದರು.
Published on

ಸಿಂಧನೂರು: ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಸಿವಿಲ್ ಪ್ರಧಾನ ನ್ಯಾಯಾಧೀಶೆ ರೂಪಾ ಸಿ.ವಗ್ಗ ಹೇಳಿದರು.

ತಾಲೂಕಿನಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಎಸ್ಸಿಪಿ ಮತ್ತು ಟಿಎಸ್ಪಿ ಉಪಯೋಜನೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನೆಯಡಿ ಆಟೋ ಪ್ರಚಾರದ ಜನಜಾಗೃತಿ ಸಂಚಾರಿ ವಾಹನಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.

ಈ ಸಂಚಾರಿ ವಾಹನವು ತಾಲೂಕಿನ ಎಸ್ಸಿ-ಎಸ್ಟಿ ಜನಾಂಗದವರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ಎರಡು ದಿನಗಳ ಕಾಲ ಸಂಚರಿಸಲಿದೆ. ಕರಪತ್ರಗಳ ಹಂಚಿಕೆ ಮತ್ತು ಭಿತ್ತಿಪತ್ರಗಳನ್ನು ಅಂಟಿಸುವ ಮೂಲಕ ಅರಿವು ಮೂಡಿಸಲಿದೆ. ಶಿಕ್ಷಣದಿಂದ ಮಾತ್ರ ಅಭಿವೃದ್ಧಿ ಸಾಧ್ಯವಿದ್ದು, ಮಕ್ಕಳನ್ನು ಶಾಲೆಗೆ ಕಳಿಸಬೇಕೆಂದು ಜನಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net