ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪ್ರಮುಖ ಪಾತ್ರ; ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಹೇಳಿಕೆ

02082022 sindhanoor congress walk
Published on


ಸಿಂಧನೂರು: ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಾತ್ರ ಪ್ರಮುಖವಾಗಿದ್ದು, ಉಳಿದ ಪಕ್ಷಗಳ ಕೊಡುಗೆ ಏನೆಂಬುದನ್ನು ತಿಳಿಸಬೇಕೆಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಹೇಳಿದರು.

ನಗರದ ಶಾದಿಮಹಲ್‌ನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮ ಉದ್ಘಾಟಿಸಿ ಸೋಮವಾರ ಮಾತನಾಡಿದರು. ಬಿಜೆಪಿ ಕೋಮುವಾದಿ ಪಕ್ಷವಾಗಿದೆ. ದೇಶದಲ್ಲಿನ ಕೋಮು ಗಲಭೆಗೆ ಮೂಲ ಪ್ರೇರಣೆ ಬಿಜೆಪಿಯಾಗಿದೆ. ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ. ಬಿಜೆಪಿ ಸರ್ಕಾರ ತಂತಿ ಮೇಲೆ ನಡೆಯುತ್ತಿದ್ದು, ಅಭಿವೃದ್ಧಿ ಮರೆತಿದೆ. ಪಕ್ಷದ ಸೂಚನೆ ಮೇರೆಗೆ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net