ಕಾರ್ಮಿಕರಿಗೆ ಬಿಕ್ಕಟ್ಟಿನ ಪರಿಸ್ಥಿತಿ

Untitled design (7)
Published on

ಸಿಂಧನೂರು: ದೇಶದಲ್ಲಿ ಫ್ಯಾಸಿಸ್ಟ್ ಶಕ್ತಿಗಳು ಅಧಿಕಾರದ ಚುಕ್ಕಾಣಿ ಹಿಡಿದಿವೆ. ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ಮಾಡುವ ಮೂಲಕ ನಾಲ್ಕು ಕೋಡ್‌ಗಳನ್ನಾಗಿ ವಿಂಗಡಿಸಿ ಹಕ್ಕುಗಳನ್ನು ಕಸಿದುಕೊಂಡಿವೆ. ಇಂತಹ ಸಂದಿಗ್ಧ ಸಂದರ್ಭದಲ್ಲಿ ಕಾರ್ಮಿಕರು ಒಗ್ಗೂಡಿ ಫ್ಯಾಸಿಸ್ಟ್ ಶಕ್ತಿಗಳನ್ನು ಕಿತ್ತೊಗೆಯುವ ಮೂಲಕ ರಾಜ್ಯಾಧಿಕಾರವನ್ನು ಹಿಡಿಯಬೇಕು ಎಂದು ಎಐಸಿಸಿಟಿಯು ಸಂಚಾಲಕ ಬಸವರಾಜ ಎಕ್ಕಿ ಕರೆ ಹೇಳಿದರು.

ನಗರದ ಗಾಂಧಿ ಸರ್ಕಲ್‌ನಲ್ಲಿ ಎಐಸಿಸಿಟಿಯುವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಕಾರ್ಮಿಕರ ದಿನಾಚರಣೆಯಲ್ಲಿ ಗುರುವಾರ ಮಾತನಾಡಿದರು. ಕಳೆದ ದಶಕದಿಂದ ಕಾರ್ಮಿಕರು ಬಿಕ್ಕಟ್ಟಿನ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಕುಟುಂಬಗಳು ಬೀದಿಗೆ ಬಿದ್ದಿವೆ. ದೈನಂದಿನ ಅಗತ್ಯ ವಸ್ತುಗಳ ಬೆಲೆ, ನಿರುದ್ಯೋಗ ಅಸಮಾನ ಹಂಚಿಕೆಯಿಂದ ನರಕಯಾತನೆ ಅನುಭವಿಸುತ್ತಿದ್ದಾರೆ. ಗುತ್ತಿಗೆ ಕಾರ್ಮಿಕ ಪದ್ಧತಿಯನ್ನು ರದ್ದುಗೊಳಿಸಬೇಕು. 42 ಸಾವಿರ ರೂ. ಕನಿಷ್ಠ ವೇತನ ಜಾರಿಗೊಳಿಸಬೇಕು. ಕಾರ್ಮಿಕ ವಿರೋಧಿ 4 ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು ಎಂದರು.

ಭಗತ್‌ಸಿಂಗ್ ಆಟೋ ಚಾಲಕರ ಸಂಘದ ಅಧ್ಯಕ್ಷ ಬಸವರಾಜ ಕೊಂಡೆ ಎಐಸಿಸಿಟಿಯುನ ಧ್ವಜಾರೋಹಣ ನೆರವೇರಿಸಿದರು. ಸಿಪಿಐ(ಎಂಎಲ್) ಲಿಬರೇಷನ್‌ನ ಜಿಲ್ಲಾ ಕಾರ್ಯದರ್ಶಿ ನಾಗರಾಜ ಪೂಜಾರ್, ಬಸವರಾಜ ಕೊಂಡೆ, ವಿರೇಶ ಮೌಲಾಪಾಷಾ ಸೇರಿದಂತೆ ಪೌರಕಾರ್ಮಿಕರು, ಬೀದಿ ಬದಿ ವ್ಯಾಪಾರಸ್ಥರ ಹಾಗೂ ಆಟೋ ಚಾಲಕರ ಸಂಘದ ಪದಾಧಿಕಾರಿಗಳು, ಮಹಿಳೆಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net