ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ

12SND-02
Published on

ಸಿಂಧನೂರು: ಪಟ್ಟಣದ ಮಹಾತ್ಮಗಾಂಧಿ ವೃತ್ತ ಹಾಗೂ ಬಸ್ ನಿಲ್ದಾಣದಲ್ಲಿ ಬುಧವಾರ ಬೆಂಗಳೂರಿನ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದಿಂದ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ನಡೆಯಿತು.

ಪ್ರಾಧಿಕಾರ ನೇಮಿಸಿದ್ದ ಕಲಾವಿದರ ತಂಡ, ಸಂಚಾರ ನಿಯಮ ಪಾಲನೆ ಕುರಿತು ಅನೇಕ ಗೀತೆಗಳನ್ನು ಹಾಡಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿತು. ಪಿಐ ಡಿ.ದುರುಗಪ್ಪ, ಸಂಚಾರ ಪೊಲೀಸ್ ಠಾಣೆಯ ಪಿಎಸ್‌ಐ ಎಚ್.ಬಸವರಾಜ ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net