ದುರುದ್ದೇಶದಿಂದ ದಾಖಲಾಗಿರುವ ಕೇಸ್ ಹಿಂಪಡೆಯಿರಿ

290822 Coalition of Progressive Organizations Appeal in Sindhanur
ಸಿಂಧನೂರಿನಲ್ಲಿ ತಹಸೀಲ್ದಾರ್ ಅರುಣ ದೇಸಾಯಿಗೆ ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಸೋಮವಾರ ಮನವಿ ಸಲ್ಲಿಸಲಾಯಿತು.
Published on

ಸಿಂಧನೂರು: ರಾಯಚೂರಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನಿಸಿದ ಘಟನೆಗೆ ಸಂಬಂಧಿಸಿದಂತೆ ಹೋರಾಟ ನಡೆಸಿದ್ದ ದಲಿತ ಹಾಗೂ ಪ್ರಗತಿಪರ ಮುಖಂಡರ ಮೇಲೆ ದುರುದ್ದೇಶದಿಂದ ದಾಖಲಿಸಿರುವ ಪ್ರಕರಣಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ ತಹಸೀಲ್ದಾರ್ ಅರುಣ ದೇಸಾಯಿಗೆ ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಸೋಮವಾರ ಮನವಿ ಸಲ್ಲಿಸಲಾಯಿತು.

ರಾಜ್ಯ ಸರ್ಕಾರ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯ ವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿದೆ. ಜನವಿರೋಧಿ ಮತ್ತು ಮನುವಾದಿಗಳಿಗೆ ಮಣೆಹಾಕುವ ಸರ್ಕಾರ ಜನಪರವಾಗಿ ಧ್ವನಿ ಎತ್ತುವವರನ್ನು ಬಂಧಿಸುವ ಜತೆಗೆ ನಿಬಂಧನೆಗಳನ್ನು ಹೇರುತ್ತಿದೆ. ರಾಜ್ಯಾದ್ಯಂತ ದಲಿತರ ಮೇಲೆ ನಡೆದಿರುವ ದೌರ್ಜನ್ಯ ಮತ್ತು ಕೊಲೆಗಳ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕೆಂದು ಒತ್ತಾಯಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net