ಕಾಂಗ್ರೆಸ್ ಪಂಚಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ

Sindhanour yeshogade shibira
ಸಿಂಧನೂರಿನಲ್ಲಿ ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ತಾಲೂಕು ಸಮಿತಿಯಿಂದ ಮಂಗಳವಾರ ಆಯೋಜಿಸಿದ್ದ ಯಶೋಗಾಥೆ ಶಿಬಿರವನ್ನು ಶಾಸಕ ಹಂಪನಗೌಡ ಬಾದರ್ಲಿ ಉದ್ಘಾಟಿಸಿದರು. ತಾಪಂ ಇಒ ಚಂದ್ರಶೇಖರ, ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಾದರ್ಲಿ, ತಹಸೀಲ್ದಾರ್ ಅರುಣ್ ದೇಸಾಯಿ, ನಗರಸಭೆ ಪ್ರಭಾರಿ ಪೌರಾಯುಕ್ತೆ ಶ್ರುತಿ ಕೆ. ಇದ್ದರು.
Published on

ಸಿಂಧನೂರು: ಚುನಾವಣೆ ವೇಳೆ ಕೊಟ್ಟ ಮಾತಿನಂತೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಲೇ ಜನರ ಕಲ್ಯಾಣಕ್ಕಾಗಿ ಪಂಚಗ್ಯಾರಂಟಿ ಯೋಜನೆ ಜಾರಿ ಮಾಡಿ ಯಶಸ್ಸು ಕಂಡಿರುವುದು ಇತಿಹಾಸದಲ್ಲಿ ಮೊದಲಿನದ್ದಾಗಿದೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ನಗರದ ಟೌನ್‌ಹಾಲ್‌ನಲ್ಲಿ ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ತಾಲೂಕು ಸಮಿತಿಯಿಂದ ಮಂಗಳವಾರ ಆಯೋಜಿಸಿದ್ದ ಯಶೋಗಾಥೆ ಶಿಬಿರ ಉದ್ಘಾಟಿಸಿ ಮಾತನಾಡಿದರು. ಗ್ಯಾರಂಟಿ ಯೋಜನೆಗಳಿಗಾಗಿ ಪ್ರತಿ ವರ್ಷ 56 ಸಾವಿರ ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ರಾಜ್ಯದ 4.65 ಕೋಟಿ ಜನರು ಯೋಜನೆಯ ಲಾಭ ಪಡೆಯುತ್ತಿರುವುದು ದಾಖಲೆಯಾಗಿದೆ. ದೇಶದಲ್ಲಿಯೇ ಐತಿಹಾಸಿಕ ಎನ್ನುವಂತಹ ಯೋಜನೆಗಳನ್ನು ರಾಜ್ಯ ಸರ್ಕಾರ ಜಾರಿ ಮಾಡಿರುವುದು ಗಮನಾರ್ಹ ಸಂಗತಿಯಾಗಿದೆ ಎಂದರು.

ಪಂಚ ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ವೈ.ಅನಿಲ್‌ಕುಮಾರ್ ಮಾತನಾಡಿ, ತಾಲೂಕಿನಲ್ಲಿ 72,395 ಗೃಹಲಕ್ಷ್ಮಿ, 1,04,533 ಅನ್ನಭಾಗ್ಯ, 4,72,000 ಶಕ್ತಿ, 55,297 ಗೃಹಜ್ಯೋತಿ, 18,389 ಯುವನಿಧಿ ಫಲಾನುಭವಿಗಳು ಇದ್ದಾರೆ. ಸರ್ಕಾರದ ನೂರಾರು ಕೋಟಿ ರೂ. ಸಹಾಯಧನ ಫಲಾನುಭವಿಗಳಿಗೆ ತಲುಪಿದೆ ಎಂದರು.

ತಾಪಂ ಇಒ ಚಂದ್ರಶೇಖರ ಮಾತನಾಡಿದರು. ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಾದರ್ಲಿ, ತಹಸೀಲ್ದಾರ್ ಅರುಣ್ ದೇಸಾಯಿ, ನಗರಸಭೆ ಪ್ರಭಾರ ಪೌರಾಯುಕ್ತೆ ಶ್ರುತಿ ಕೆ., ಅಧ್ಯಕ್ಷೆ ಮಂಜುಳಾ ಪ್ರಭುರಾಜ, ಇಂದಿರಾಗಾಂಧಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಶ್ರೀದೇವಿ ಶ್ರೀನಿವಾಸ, ಸಿಡಿಪಿಒಗಳಾದ ಅಶೋಕ, ಲಿಂಗನಗೌಡ, ಆಹಾರ ಇಲಾಖೆ ನಿರೀಕ್ಷಕ ಹನುಮೇಶ ನಾಯಕ, ಸಾರಿಗೆ ಘಟಕ ವ್ಯವಸ್ಥಾಪಕ ಹನುಮೇಶ, ಜೆಸ್ಕಾಂ ಎಇಇ ಶ್ರೀನಿವಾಸ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net