ಭಗೀರಥರ ಆದರ್ಶಗಳನ್ನು ಅಳವಡಿಸಿಕೊಳ್ಳಿ

Untitled design (64)
ಸಿಂಧನೂರಿನ ತಹಸಿಲ್ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಮಹರ್ಷಿ ಭಗೀರಥ ಜಯಂತಿಯಲ್ಲಿ ಶಾಸಕ ಹಂಪನಗೌಡ ಬಾದರ್ಲಿ, ತಹಸೀಲ್ದಾರ್ ಅರುಣ ದೇಸಾಯಿ, ನಗರಸಭೆ ಪೌರಾಯುಕ್ತ ಮಂಜುನಾಥ ಗುಂಡೂರು, ಖಾಜಿ ಮಲ್ಲಿಕ್ ವಕೀಲ, ಶಿರಸ್ತೇದಾರ್ ಅಂಬಾದಾಸ ಇತರರಿದ್ದರು.
Published on

ಸಿಂಧನೂರು: ಮಹರ್ಷಿ ಭಗೀರಥರ ಜೀವನದ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.
ನಗರದ ತಹಸಿಲ್ ಕಚೇರಿಯಲ್ಲಿ ಮಂಗಳವಾರ ತಾಲೂಕು ಆಡಳಿತದಿಂದ ಆಯೋಜಿಸಿದ್ದ ಮಹರ್ಷಿ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸರ್ಕಾರವು ದಾರ್ಶನಿಕರ ಜಯಂತಿಗಳ ಆಚರಣೆಯ ಮೂಲಕ ಅವರ ತತ್ತ್ವಾದರ್ಶಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುತ್ತಿದೆ. ಅಲ್ಲದೆ ಆಯಾ ಸಮುದಾಯಗಳ ಸಂಘಟನೆಗೂ ಸಹಕಾರಿಯಾಗಿದೆ. ಸಮುದಾಯು ಶೈಕ್ಷಣಿಕ ಅಭಿವೃದ್ಧಿ ಸಾಧಿಸಬೇಕೆಂದರು.

ತಹಸೀಲ್ದಾರ್ ಅರುಣ ದೇಸಾಯಿ, ನಗರಸಭೆ ಪೌರಾಯುಕ್ತ ಮಂಜುನಾಥ ಗುಂಡೂರು, ಶಿರಸ್ತೇದಾರ್ ಅಂಬಾದಾಸ, ಬಿಜೆಪಿ ನಗರ ಅಧ್ಯಕ್ಷ ಮಲ್ಲಿಕಾರ್ಜುನ ಜೀನೂರು, ನಗರ ಕಾಂಗ್ರೆಸ್ ಅಧ್ಯಕ್ಷ ಖಾಜಿ ಮಲ್ಲಿಕ್ ವಕೀಲ, ಕೆ.ಮರಿಯಪ್ಪ, ನಿರುಪಾದೆಪ್ಪ ಗುಡಿಹಾಳ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net