ಮೋದಿ ಆಡಳಿತದಿಂದ ದೇಶ ಅಭಿವೃದ್ದಿ - ಕೆಪೆಕ್ ಅಧ್ಯಕ್ಷ ಕೆ.ವಿರೂಪಾಕ್ಷಪ್ಪ ಅನಿಸಿಕೆ

Sindhanuru BJP
ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಗೆಲುವಿನ ಹಿನ್ನೆಲೆಯಲ್ಲಿ ಸಿಂಧನೂರಿನ ಗಾಂಧಿವೃತ್ತದಲ್ಲಿ ಗುರುವಾರ ವಿಜಯೋತ್ಸವ ಆಚರಿಸಲಾಯಿತು.
Published on

ಸಿಂಧನೂರು: ಪ್ರಧಾನಿ ನರೇಂದ್ರ ಮೋದಿ ಆಡಳಿತ ಮೆಚ್ಚಿ ದೇಶದ ಎಲ್ಲ ರಾಜ್ಯದಲ್ಲಿ ಬಿಜೆಪಿ ಬಾವುಟ ಹಾರುವುದು ಖಚಿತ ಎನ್ನುವುದಕ್ಕೆ ಈಶಾನ್ಯ ರಾಜ್ಯಗಳ ಫಲಿತಾಂಶ ಸಾಕ್ಷಿಯಾಗಿದೆ ಎಂದು ಕೆಪೆಕ್ ಅಧ್ಯಕ್ಷ ಕೆ.ವಿರೂಪಾಕ್ಷಪ್ಪ ಹೇಳಿದರು.

ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಗೆಲುವಿನ ಹಿನ್ನೆಲೆಯಲ್ಲಿ ಗಾಂಧಿ ವೃತ್ತದಲ್ಲಿ ವಿಜಯೋತ್ಸವದಲ್ಲಿ ಮಾತನಾಡಿದರು. ದೇಶದ ಅಭಿವೃದ್ಧಿಗೆ ಮುನ್ನುಡಿ ಬರೆದಿರುವ ನರೇಂದ್ರ ಮೋದಿ ಇತರ ದೇಶಗಳು ನಮ್ಮ ದೇಶದ ಕಡೆ ನೋಡುವಂತೆ ಮಾಡಿದ್ದಾರೆ. ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ ಎಂದರು.

ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮಧ್ವರಾಜ ಆಚಾರ್ಯ, ಬಿಜೆಪಿ ನಗರ ಮಂಡಲ ಅಧ್ಯಕ್ಷ ನಿರುಪಾದೆಪ್ಪ ಜೋಳದರಾಶಿ, ಗ್ರಾಮೀಣ ಮಂಡಲ ಅಧ್ಯಕ್ಷ ಹನುಮೇಶ ಸಾಲಗುಂದ, ಪ್ರಮುಖರಾದ ಎನ್.ಶಿವನಗೌಡ ಗೊರೇಬಾಳ, ವೆಂಕನಗೌಡ ಮಲ್ಕಾಪುರ, ಎಂ.ದೊಡ್ಡಬಸವರಾಜ, ರಾಜೇಶ ಹಿರೇಮಠ, ಮಲ್ಲಿಕಾರ್ಜುನ ಜೀನೂರು, ಶಿವಬಸನಗೌಡ ಗೊರೇಬಾಳ, ಪರಮೇಶ್ವರಪ್ಪ ದಢೇಸುಗೂರು, ಹನುಮಂತರಡ್ಡಿ ಹುಡಾ, ಶಿವಕುಮಾರ ಹಿರೇಮಠ ಗುಡದೂರು,ಶೈಲಜಾ, ಸಹನಾ ಹಿರೇಮಠ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net