

ಸಿಂಧನೂರು: ಸಾರ್ವಜನಿಕ ಆಸ್ಪತ್ರೆಯಲ್ಲಿ ಆಕ್ಸಿಜನ್, ರೆಮ್‌ಡೆಸಿವಿರ್ ಕೊರತೆಯಾಗದಂತೆ ಕ್ರಮಕೈಗೊಳ್ಳಲಾಗಿದೆ ಎಂದು ಶಾಸಕ ವೆಂಕಟರಾವ ನಾಡಗೌಡ ತಿಳಿಸಿದರು.
ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಂಗಳವಾರ ಆಕ್ಸಿಜನ್ ಘಟಕ ಉದ್ಘಾಟಿಸಿ ಮಾತನಾಡಿದರು. ಕಳೆದ ವಾರದಿಂದ ಆಸ್ಪತ್ರೆಯಲ್ಲಿ ಆಕ್ಸಿಜನ್, ರೆಮ್‌ಡೆಸಿವಿಆರ್ ಸಿಗುತ್ತಿಲ್ಲ ಎನ್ನುವ ದೂರುಗಳಿದ್ದವು. ಈಗ ಸಮಸ್ಯೆ ನಿವಾರಿಸಲಾಗಿದೆ. ಕೋವಿಡ್ ಸೋಂಕಿತರಿಗೆ ತುರ್ತು ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ. ಖಾಸಗಿ ಆಸ್ಪತ್ರೆಯ 5 ಕಡೆಗಳಲ್ಲೂ ಸೋಂಕಿತರಿಗೆ ಚಿಕಿತ್ಸೆಗೆ ಅನುಕೂಲ ಮಾಡಿಕೊಡಲಾಗಿದೆ. ಕೋವಿಡ್ ಆಸ್ಪತ್ರೆಗೂ ಅಗತ್ಯ ಸೌಲತ್ತು ನೀಡಲಾಗಿದೆ ಎಂದರು.
ನಗರಸಭೆಯಿಂದ 6 ದಿನಕ್ಕೊಮ್ಮೆ ಕುಡಿವ ನೀರು ಪೂರೈಕೆ ಮಾಡಲು ನಗರಸಭೆ ಆಡಳಿತ ಮಂಡಳಿ ನಿರ್ಧರಿಸಿತ್ತು. ರಮಜಾನ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ 4 ದಿನಕ್ಕೊಮ್ಮೆ ನೀರು ಸರಬರಾಜು ಮಾಡಲು ಸೂಚಿಸಲಾಗಿದೆ. ಈಗ ಕಾಲುವೆ ನೀರು ತುಂಬಿಕೊಂಡಿರುವುದರಿಂದ ಮುಂದೆ ಸಮಸ್ಯೆ ಆಗುವುದಿಲ್ಲ ಎಂದರು.