ಗುಣಮಟ್ಟದ ಮೊಟ್ಟೆ ಪೂರೈಕೆ

HALAPPA ACHAR MLA YELBURGA
Published on

ಸಿಂಧನೂರು: ಯಾರೇ ಕೂಗಾಡಿದರೂ, ಏನೇ ತಂತ್ರ ಮಾಡಿದರೂ 2023ರ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಖಚಿತ ಎಂದು ಸಚಿವ ಹಾಲಪ್ಪ ಆಚಾರ್ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರೊಂದಿಗೆ ಮಾತನಾಡಿ, ಚುನಾವಣೆ ಬಂದಾಗೊಮ್ಮೆ ಮಾತ್ರ ಕಾಂಗ್ರೆಸ್ ಅಭಿವೃದ್ಧಿ ವಿಚಾರ ಮಾತನಾಡುತ್ತದೆ. ಕಾಂಗ್ರೆಸ್ ನಡಿಗೆ ಕೃಷ್ಣ ಕಡೆಗೆ, ನೀರಾವರಿಗೆ 10 ಸಾವಿರ ಕೋಟಿ ರೂ. ತೆಗೆದಿರಿಸುವ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಅಧಿಕಾರದಲ್ಲಿದ್ದಾಗ ಏನು ಕೊಡುಗೆ ನೀಡಿದ್ದಾರೆಂದು ತಿಳಿಸಲಿ. ಅಂಗನವಾಡಿಗಳಿಗೆ ಗುಣಮಟ್ಟದ ಆಹಾರ ಪೂರೈಕೆ ಮಾಡಲಾಗುತ್ತಿದೆ. ಈಗಾಗಲೇ ಕೆಲವು ದೂರಿನ್ವಯ ಕ್ರಮಕೈಗೊಳ್ಳಲಾಗಿದೆ. ತತ್ತಿ ಪೂರೈಕೆಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಲಾಗಿದೆ. ಪಾರದರ್ಶಕದಿಂದ ಇಲಾಖೆ ಕೆಲಸ ಮಾಡುತ್ತಿದೆ. ನೌಕರರ ಬೇಡಿಕೆ ಸಂಬಂಧಿಸಿದಂತೆ ಚರ್ಚಿಸಿ, ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಮುಖಂಡರಾದ ವೀರೇಶ ನಾಡಗೌಡ, ಬಸವರಾಜ ಬಂಗಾರಶೆಟ್ರ, ಹರೀಶಶ್ರೇಷ್ಠಿ, ಡಾ.ಚನ್ನನಗೌಡ ಪಾಟೀಲ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net