ಅತ್ಯಾಚಾರಿಗೆ 20 ವರ್ಷ ಜೈಲು ಶಿಕ್ಷೆ

Published on
ಸಿಂಧನೂರು: ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2020ರ ಫೆಬ್ರವರಿಯಲ್ಲಿ ನಡೆದಿದ್ದ ಇಬ್ಬರು ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಮೇಲಿನ ಆಪಾದನೆ ಸಾಬೀತಾಗಿದ್ದು, ನಗರದ 3ನೇ ಅಧಿಕ ಜಿಲ್ಲಾ ಮತ್ತು ಸತ್ರ(ಪೋಕ್ಸೋ ವಿಶೇಷ) ನ್ಯಾಯಾಲಯ 20 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿ ಬುಧವಾರ ಆದೇಶ ನೀಡಿದೆ.

ಗ್ರಾಮೀಣ ಠಾಣೆ ವ್ಯಾಪ್ತಿಯ ಆರ್.ಎಚ್.ಕ್ಯಾಂಪ್.ನಂ-2ನ ಅರುಣ್‌ರಾಯ್ ಠಾಕೂರ್ ಅಪರಾಧಿ. ಅಪ್ರಾಪ್ತ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಅರುಣ್‌ರಾಯ್ ಠಾಕೂರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಸಿಪಿಐ ಬಾಲಚಂದ್ರ ಲಕ್ಕಂ, ಕೋರ್ಟ್‌ಗೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಅರುಣ್‌ರಾಯ್ ಠಾಕೂರ್ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ನ್ಯಾಯಾಲಯವು ಪುರಾವೆಗಳನ್ನು ಪರಿಶೀಲಿಸಿದಾಗ ಸಾಬೀತಾಗಿದೆ. ಅಪರಾಧಿಗೆ 20 ವರ್ಷ ಕಾರಾಗೃಹ ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿದೆ.

ಸರ್ಕಾರದ ಸಂತ್ರಸ್ತರ ಪರಿಹಾರ ನಿಧಿಯಿಂದ ಬಾಧಿತರಿಗೆ ತಲಾ 7.50 ಲಕ್ಷ ರೂ. ಪರಿಹಾರ ನೀಡಬೇಕೆಂದು ನ್ಯಾಯಾಧೀಶ ಬಿ.ಬಿ.ಜಕಾತಿ ಆದೇಶಶ ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಂ.ಮಂಜುನಾಥ ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net