ಭತ್ತ ಖರೀದಿ ಕೇಂದ್ರಕ್ಕೆ ಒತ್ತಾಯ

19102020 Sindhanoor DCM Lakshmana Sawadi MLA Venkatarao Nadagowda
Published on

ಡಿಸಿಎಂ ಲಕ್ಷ್ಮಣ ಸವದಿಗೆ ಶಾಸಕ ವೆಂಕಟರಾವ್ ನಾಡಗೌಡ ಮನವಿ

ಸಿಂಧನೂರು: ತಾಲೂಕಲ್ಲಿ ಭತ್ತ ಖರೀದಿ ಕೇಂದ್ರವನ್ನು ಶೀಘ್ರ ಆರಂಭಿಸುವಂತೆ ಒತ್ತಾಯಿಸಿ ಶಾಸಕ ವೆಂಕಟರಾವ್ ನಾಡಗೌಡ ಡಿಸಿಎಂ ಲಕ್ಷ್ಮಣ ಸವದಿಗೆ ಜವಳಗೇರಾದಲ್ಲಿ ಮಂಗಳವಾರ ಮನವಿ ಸಲ್ಲಿಸಲಾಯಿತು.

ತಾಲೂಕಿನಲ್ಲಿ ಭತ್ತವೇ ಪ್ರಮುಖ ಬೆಳೆ. 1.50 ಲಕ್ಷ 2 ಲಕ್ಷ ಎಕರೆಯಲ್ಲಿ ಭತ್ತ ಬೆಳೆದಿದ್ದು, ಈಗಾಗಲೇ ನದಿ ತೀರದಲ್ಲಿ ಭತ್ತ ಕಟಾವು ನಡೆಯುತ್ತಿದ್ದು, ಆದರೆ, 75 ಕೆಜಿಗೆ 950 ರಿಂದ 1000 ರೂ. ಬೆಲೆ ಇದೆ. ಇದರಿಂದ ರೈತರಿಗೆ ಕಷ್ಟವಾಗಿದೆ. ಕೂಡಲೇ ಭತ್ತ ಖರೀದಿ ಕೇಂದ್ರ ಆರಂಭಿಸಿ, ರೈತರಿಗೆ ಸೂಕ್ತ ಬೆಲೆ ಒದಗಿಸಬೇಕು ಎಂದು ಒತ್ತಾಯಿಸಿದರು. ಭತ್ತ ಖರೀದಿ ಆರಂಭಿಸುವ ಭರವಸೆಯನ್ನು ಡಿಸಿಎಂ ಲಕ್ಷ್ಮಣ ಸವದಿ ನೀಡಿದರು.

ಜವಳಗೇರಾ ಹೋಬಳಿ ಕೇಂದ್ರ. ಪಪಂ ಆಗುವಷ್ಟು ಜನಸಂಖ್ಯೆ ಇದೆ. ಇಲ್ಲಿ ಸುಸಜ್ಜಿತ ಬಸ್ ನಿಲ್ದಾಣ ಇಲ್ಲ. ಕೂಡಲೇ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಡಿಸಿಎಂ ಲಕ್ಷ್ಮಣ ಸವದಿಗೆ ಶಾಸಕ ವೆಂಕಟರಾವ ನಾಡಗೌಡ ಮನವಿ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net