ಸಿಂಧನೂರು: ನಗರದ ಸತ್ಯ ಗಾರ್ಡನ್‌ನಲ್ಲಿ ಸೆ.20 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದಿಂದ ಜಿಲ್ಲಾಮಟ್ಟದ 3ನೇ ವರ್ಷದ ಶಿಕ್ಷಕರ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಜಿಲ್ಲಾ ಉಪಾಧ್ಯಕ್ಷ ಎಂ.ದೊಡ್ಡಬಸವರಾಜ ತಿಳಿಸಿದರು.
ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ
ನಗರದ ಪತ್ರಿಕಾಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮದ ಉದ್ಘಾಟನೆಗೆ ಗೃಹ ಸಚಿವ ಜಿ.ಪರಮೇಶ್ವರ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್, ಸಚಿವ ಎನ್.ಎಸ್.ಬೋಸರಾಜು, ಶಾಲಾ ಒಕ್ಕೂಟದ ಜಿಲ್ಲಾಧ್ಯಕ್ಷ ಹಂಪನಗೌಡ ಬಾದರ್ಲಿ, ಜಿಲ್ಲೆಯ ಶಾಸಕರು, ಒಕ್ಕೂಟದ ಪದಾಧಿಕಾರಿಗಳು ಸೇರಿ ಇತರರು ಭಾಗವಹಿಸುವರು ಎಂದು ತಿಳಿಸಿದರು.
ಒಕ್ಕೂಟ ತಾಲೂಕಾಧ್ಯಕ್ಷ ವೈ.ನರೇಂದ್ರನಾಥ ಮಾತನಾಡಿ, ಕಾರ್ಯಕ್ರಮದಲ್ಲಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಕಾಲೇಜ್‌ಗಳ 200 ಕ್ಕೂ ಅಧಿಕ ಶಿಕ್ಷಕ, ಉಪನ್ಯಾಸಕರಿಗೆ ಆದರ್ಶ ಶಿಕ್ಷಕ ಪ್ರಶಸ್ತಿ ನೀಡಲಾಗುತ್ತಿದೆ ಎಂದರು. ಒಕ್ಕೂಟದ ಪ್ರಮುಖರಾದ ವೀರೇಶ ಅಗ್ನಿ, ಎನ್.ಸತೀಶ್, ಜಿ.ಸತ್ಯನಾರಾಯಣ, ಪದ್ಮನಾಯ್ಡು, ಸೈಯದ್ ತನ್ವೀರ್, ವಿಶ್ವನಾಥ, ಬಸವರಾಜ ಅರಗಿನಮರಕ್ಯಾಂಪ್ ಇದ್ದರು.