

ಸಿಂಧನೂರು: ನಗರದ ಎಪಿಎಂಸಿ ರೈತ ಭವನದಲ್ಲಿ ಜು.16 ರಿಂದ 19 ವರೆಗೆ ಶ್ರೀ ಗವಿಸಿದ್ದೇಶ್ವರ ಜಾನಪದ ಕಲಾ ಸಾಂಸ್ಕೃತಿಕ ಸಂಘ ಹಾಗೂ ತಾಲೂಕು ಕನ್ನಡ ಜಾನಪದ ಪರಿಷತ್ ಆಶ್ರಯದಲ್ಲಿ ವೀರಗಾಸೆ ಮತ್ತು ಡೊಳ್ಳು ಕುಣಿತ ಕುರಿತು ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ಆಯೋಜಿಸಲಾಗಿದೆ ಎಂದು ಕನ್ನಡ ಜಾನಪದ ಪರಿಷತ್ ತಾಲೂಕು ಸಂಚಾಲಕ ಬೀರಪ್ಪ ಶಂಭೋಜಿ ತಿಳಿಸಿದರು.
ನಗರದ ಪತ್ರಿಕಾಭವನ ದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿವಿಧ ಕಾಲೇಜ್‌ಗಳಿಗೆ ಭೇಟಿ ನೀಡಿ ತರಬೇತಿಗೆ ವಿದ್ಯಾರ್ಥಿಗಳನ್ನು ಆಹ್ವಾನಿಸಲಾಗಿದೆ. ತರಬೇತಿ ಸಂಪೂರ್ಣ ಉಚಿತವಾಗಿರಲಿದೆ ಎಂದು ತಿಳಿಸಿದರು.
ಶ್ರೀ ಗವಿಸಿದ್ದೇಶ್ವರ ಜಾನಪದ ಕಲಾ ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ಹನುಮೇಶ ಬಾಗೋಡಿ, ತತ್ವಪದಕಾರ ನಾರಾಯಣಪ್ಪ ಮಾಡಸಿರವಾರ, ಬಸವರಾಜ ಗಸ್ತಿ, ಬಸವರಾಜ ಇದ್ದರು.