ಸೂರ್ಯಕಾಂತಿ ಫಸಲು ಹಾಳು

2708202 snd suryakanti
Published on

ಸಿಂಧನೂರು: ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾಗಿರುವ ಸೂರ್ಯಕಾಂತಿ ಫಸಲು ಮಳೆಗೆ ಹಾಳಾಗಿದ್ದು ರೈತರು ಕಂಗಲಾಗಿದ್ದಾರೆ. ತುರ್ವಿಹಾಳ ಹೋಬಳಿ ವ್ಯಾಪ್ತಿಯಲ್ಲಿ 550 ಹೆಕ್ಟೇರ್ ಪ್ರದೇಶದಲ್ಲಿ ರೈತರು ಸೂರ್ಯಕಾಂತಿ ಬಿತ್ತನೆ ಮಾಡಿದ್ದು, ಶುಕ್ರವಾರ ರಾತ್ರಿ ಬಿದ್ದ ಮಳೆಯಿಂದ ಬೆಳೆ ಜಲಾವೃತವಾಗಿದೆ. ಇದರಿಂದ ತೇವಾಂಶ ಹೆಚ್ಚಳಗೊಂಡು ಬೆಳೆ ಕೊಳೆಯುವ ಆತಂಕ ಎದುರಾಗಿದೆ. 15 ದಿನಗಳಲ್ಲಿ ಕಟಾವಿಗೆ ಬರಬೇಕಿದ್ದ ಬೆಳೆ, ಮಳೆಯಿಂದಾಗಿ ನಷ್ಟದ ಹಾದಿ ಹಿಡಿದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net