ವಿವೇಕಾನಂದರ ವಿಚಾರಧಾರೆಗಳು ಮಾದರಿ

Untitled design (19)
Published on

ಸಿಂಧನೂರು: ಜಗತ್ತಿಗೆ ಸ್ವಾಮಿ ವಿವೇಕಾನಂದರು ಆದರ್ಶಪ್ರಾಯ ವ್ಯಕ್ತಿಯಾಗಿದ್ದಾರೆ ಎಂದು ಉಪನ್ಯಾಸಕಿ ಈರಮ್ಮ ಹಿರೇಮಠ ಹೇಳಿದರು. ನಗರದ ಬಪ್ಪೂರ ರಸ್ತೆ ಮಾರ್ಗದ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಹಮ್ಮಿಕೊಂಡಿದ್ದ ವಿವೇಕ ಪೂರ್ಣಿಮೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಜಗತ್ತಿಗೆ ಸ್ವಾಮಿ ವಿವೇಕಾನಂದರು ನೀಡಿದ ಕೊಡುಗೆ ಅಪಾರವಾಗಿದೆ. ಯುವ ಸಂಪತ್ತು ದೇಶದ ಏಳಿಗೆಗೆ ಸಧ್ವಿನಿಯೋಗವಾಗಬೇಕು. ಅವರ ವಿಚಾರಧಾರೆಗಳು ನಮ್ಮೆಲ್ಲರಿಗೂ ಮಾದರಿಯಾಗಿವೆ. ಯುವಕರು ಅವರನ್ನು ಅಧ್ಯಯನ ಮಾಡಬೇಕು ಎಂದರು. ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಧ್ವರಾಜ ಆಚಾರ್ಯ ಮಾತನಾಡಿದರು. ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ಸದಾನಂದ ಸಾನ್ನಿಧ್ಯ ವಹಿಸಿದ್ದರು. ಜೆಸ್ಕಾಂ ಜೆಇ ಮಹಾನಂದ, ಶಿಕ್ಷಕ ಕಳಕಪ್ಪ ಗಡದ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net