ಚರಂಡಿ ನಿರ್ಮಾಣಕ್ಕೆ ನಿರ್ಲಕ್ಷ್ಯ

Untitled design (19)
ಸಿಂಧನೂರು ತಾಲೂಕಿನ ತಿಡಿಗೋಳ ಗ್ರಾಮದ ಓಣಿಯೊಂದರ ರಸ್ತೆಯ ಮೇಲೆ ತ್ಯಾಜ್ಯ ಮಡುಗಟ್ಟಿರುವುದು.
Published on

ಸಿಂಧನೂರು: ತಾಲೂಕಿನ ತಿಡಿಗೋಳ ಗ್ರಾಮದಲ್ಲಿ ಚರಂಡಿ ಇಲ್ಲದೆ ತ್ಯಾಜ್ಯ ನೀರು ರಸ್ತೆ ಮೇಲೆ ಸಂಗ್ರಹವಾಗುತ್ತಿದ್ದು, ಸೊಳ್ಳೆಗಳು ಹೆಚ್ಚಾಗಿ ಜನತೆ ಸಾಂಕ್ರಾಮಿಕ ರೋಗದ ಭೀತಿ ಎದುರಿಸುವಂತಾಗಿದೆ. ತ್ಯಾಜ್ಯ ಸಂಗ್ರಹವಾಗಿರುವ ರಸ್ತೆಯಲ್ಲೇ ಜನರು ನಡೆದುಕೊಂಡು ಹೋಗಬೇಕಾಗಿದೆ. ವಿದ್ಯಾರ್ಥಿಗಳು ಕೂಡ ತ್ಯಾಜ್ಯ ಸಂಗ್ರಹವಾಗಿರುವ ನೀರಿನಲ್ಲೇ ಶಾಲೆಗೆ ತೆರಳಿ ಮನೆಗೆ ಮರಳುವುದರಿಂದ ಪಾಲಕರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ಕಳೆದ ಎರಡು ವರ್ಷಗಳಿಂದ ಈ ಸಮಸ್ಯೆ ಇದೆ. ಆದರೂ, ಗ್ರಾಪಂ ಸಿಬ್ಬಂದಿ ಗಂಭೀರವಾಗಿ ಪರಿಗಣಿಸಿಲ್ಲ. ತ್ಯಾಜ್ಯ ಹರಿಯಲು ಕ್ರಮಕೈಗೊಳ್ಳಬೇಕು ಎಂಬುದು ಗ್ರಾಮಸ್ಥರ ಆಗ್ರಹವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net