ಸಾರಿಗೆ ನೌಕರನ್ನು ಸರ್ಕಾರಿ ಸಿಬ್ಬಂದಿ ಎಂದು ಪರಿಗಣಿಸಲಿ

141220 Sindhanuru KSRTC Employees protest for Govt employee
ಸಾರಿಗೆ ಸಿಬ್ಬಂದಿಯನ್ನು ಸರ್ಕಾರಿ ನೌಕರರೆಂದು ಪರಿಗಣಸುವಂತೆ ಒತ್ತಾಯಿಸಿ ಸಿಂಧನೂರಿನಲ್ಲಿ ನೌಕರರು ಅನಿರ್ದಿಷ್ಟಾವಧಿ ಧರಣಿ ಭಾನುವಾರ ಆರಂಭಿಸಿದರು.
Published on

ಸಿಂಧನೂರು: ಸಾರಿಗೆ ಸಿಬ್ಬಂದಿಯನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಒತ್ತಾಯಿಸಿ ನಗರದ ಮಹಾತ್ಮಗಾಂಧಿ ವೃತ್ತದಲ್ಲಿ ಭಾನುವಾರ ನೂರಾರು ಸಂಖ್ಯೆಯ ನೌಕರರು ಭಾನುವಾರ ಧರಣಿ ನಡೆಸಿದರು.
ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಲವು ದಶಕಗಳಿಂದ ಹೋರಾಡುತ್ತಾ ಬಂದಿದ್ದರೂ ಸಹ ಸರ್ಕಾರಗಳು ಸಕರಾತ್ಮಕ ಸ್ಪಂದನೆ ನೀಡಿಲ್ಲ. ಇದರಿಂದ ಬೇಸತ್ತು ಸಾರಿಗೆ ನೌಕರರೆಲ್ಲ ಒಗ್ಗಟ್ಟಿನಿಂದ ಕರ್ತವ್ಯಕ್ಕೆ ಹಾಜರಾಗದೆ, ಬಸ್‌ಗಳನ್ನು ಸ್ಥಗಿತಗೊಳಿಸಿ ಮುಷ್ಕರಕ್ಕೆ ಧುಮಕಿದ್ದೇವೆ. ಈ ಹೋರಾಟ ಯಾವ ಸಂಘಟನೆಗಳ ಪ್ರೇರಿತವಲ್ಲ. ನಾವೇ ಸ್ವಯಂ ಪ್ರೇರಿತರಾಗಿ ಹೋರಾಟಕ್ಕಿಳಿದಿದ್ದೇವೆ. ಈಗಲಾದರೂ ಸಾರಿಗೆ ನೌಕರರ ಅಳಲು ಸರ್ಕಾರಕ್ಕೆ ಅರ್ಥವಾಗಲಿ. ಬೇಡಿಕೆ ಈಡೇರಿಕೆಗೆ ಮುಂದಾಗಲಿ ಎಂದು ಒತ್ತಾಯಿಸಿದರು.
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಶರಣಪ್ಪ ಮರಳಿ, ಉಪಾಧ್ಯಕ್ಷ ರಾಮಯ್ಯ ಜವಳಗೇರಾ, ಬ್ಲಾಕ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಪಂಪನಗೌಡ ಬಾದರ್ಲಿ, ನಗರಸಭೆ ಮಾಜಿ ಅಧ್ಯಕ್ಷ ಸೈಯ್ಯದ್ ಜಾಫರ್‌ಅಲಿ ಜಾಗೀರದಾರ್ ಬೆಂಬಲ ವ್ಯಕ್ತಪಡಿಸಿದರು. ಸಾರಿಗೆ ಇಲಾಖೆಯ ಸಿಬ್ಬಂದಿ ಮಲ್ಲಾರೆಡ್ಡಿ, ಉಮೇಶ, ಓಬಳೆಪ್ಪ, ಬಸನಗೌಡ, ಬಸವರಾಜ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net