ಡಾ.ನಾಗರಾಜ ಕಾಟ್ವಾ ವರ್ಗಾವಣೆ ಹಿಂಪಡೆಯಿರಿ

Sindhanour TUCI INSISTS
ಸಿಂಧನೂರಿನ ತಹಸಿಲ್ ಕಚೇರಿ ಉಪತಹಸೀಲ್ದಾರ್ ಚಂದ್ರಶೇಖರಗೆ ಟಿಯುಸಿಐ ಹಾಗೂ ಕೆಆರ್‌ಎಸ್ ಸಂಘಟನೆಯ ಪದಾಧಿಕಾರಿಗಳು ಮನವಿ ಸಲ್ಲಿಸಿದರು. ಟಿಯುಸಿಐ ಜಿಲ್ಲಾಧ್ಯಕ್ಷ ಬಿ.ಎನ್.ಯರದಿಹಾಳ, ತಾಲೂಕು ಘಟಕದ ಅಧ್ಯಕ್ಷ ರಮೇಶ ಪಾಟೀಲ್ ಬೇರಿಗಿ, ಕೆಆರ್‌ಎಸ್ ಜಿಲ್ಲಾ ಕಾರ್ಯದರ್ಶಿ ಚಿಟ್ಟಿಬಾಬು ಬೂದಿವಾಳಕ್ಯಾಂಪ್, ಅಸ್ಲಂ ಇತರರಿದ್ದರು.
Published on

ಸಿಂಧನೂರು: ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ನಾಗರಾಜ್ ಕಾಟ್ವಾ ವರ್ಗಾವಣೆ ಆದೇಶವನ್ನು ಹಿಂಪಡೆಯಲು ಒತ್ತಾಯಿಸಿ ಟಿಯುಸಿಐ ಹಾಗೂ ಕೆಆರ್‌ಎಸ್ ಸಂಘಟನೆಯ ಪದಾಧಿಕಾರಿಗಳು ತಹಸಿಲ್ ಕಚೇರಿ ಉಪತಹಸೀಲ್ದಾರ್ ಚಂದ್ರಶೇಖರಗೆ ಸೋಮವಾರ ಮನವಿ ಸಲ್ಲಿಸಿದರು.

ಡಾ.ನಾಗರಾಜ್ ಕಾಟ್ವಾ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ಒದಗಿಸುವಲ್ಲಿ ಶಕ್ತಿಮೀರಿ ಪ್ರಯತ್ನಿಸಿದ್ದಾರೆ. ಹೆರಿಗೆಗೆ ಬಂದ ಬಡ ಮತ್ತು ಮಧ್ಯಮ ವರ್ಗದ ಕುಟುಂಬದ ಮಹಿಳೆಯರಿಗೆ ಕಾಳಜಿಯಿಂದ ಹೆರಿಗೆ ಮಾಡಿಸಿ, ಜನಸ್ನೇಹಿ ವೈದ್ಯರಾಗಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಪಿಡಬ್ಲ್ಯುಡಿಕ್ಯಾಂಪ್‌ನಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆಗೆ ಮುಂಚೆಯೇ ಇವರನ್ನು ಬೇರೆಡೆಗೆ ವರ್ಗಾವಣೆ ಮಾಡಿರುವುದರ ಹಿಂದೆ ಒಳಮರ್ಮ ಅಡಗಿದೆ. ಕೆಲ ಪಟ್ಟಭದ್ರಹಿತಾಸಕ್ತಿಗಳು ದುರುದ್ದೇಶದಿಂದ ಬೇರೆಡೆ ವರ್ಗಾವಣೆ ಮಾಡಿಸಲು ಮುಂದಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡಾ.ನಾಗರಾಜ ಕಾಟ್ವಾ ಅವರು ಸರ್ಕಾರಿ ಆಸ್ಪತ್ರೆಗೆ ಬಂದ ನಂತರ 24,456 ಹೆರಿಗೆ ಮಾಡಿಸಿದ್ದು, 11,193 ಶಸ್ತ್ರಚಿಕಿತ್ಸೆ ಕೈಗೊಂಡಿದ್ದಾರೆ. ಅಲ್ಲದೇ ಅತ್ಯಂತ ಕಠಿಣ ಶಸ್ತ್ರಚಿಕಿತ್ಸೆಗಳನ್ನು ಕೈಗೊಂಡು ಬಡ ಮಹಿಳೆಯರ ಪ್ರಾಣ ಉಳಿಸಿದ್ದಾರೆ. ಅವರನ್ನು ಸಿಂಧನೂರು ತಾಲೂಕು ಆಸ್ಪತ್ರೆಯಲ್ಲಿಯೇ ಸೇವೆ ಸಲ್ಲಿಸಲು ಮುಂದುವರಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.

ಟಿಯುಸಿಐ ಜಿಲ್ಲಾಧ್ಯಕ್ಷ ಬಿ.ಎನ್.ಯರದಿಹಾಳ, ತಾಲೂಕು ಘಟಕದ ಅಧ್ಯಕ್ಷ ರಮೇಶ ಪಾಟೀಲ್ ಬೇರಿಗಿ, ಕೆಆರ್‌ಎಸ್ ಜಿಲ್ಲಾ ಕಾರ್ಯದರ್ಶಿ ಚಿಟ್ಟಿಬಾಬು ಬೂದಿವಾಳ ಕ್ಯಾಂಪ್, ಪ್ರಮುಖರಾದ ಅಸ್ಲಂ, ಮಲ್ಲಪ್ಪ ಹಾದಿಮನಿ, ಬಸವರಾಜ ಕೋಟೆ, ದುರುಗಪ್ಪ ದೇವರಮನಿ, ಸಂಗಯ್ಯಸ್ವಾಮಿ, ರಾಮಣ್ಣ ಸುಕಾಲಪೇಟೆ, ಬಾಷಾಸಾಬ್, ದುರುಗೇಶ, ಶಿವು, ಮುತ್ತಣ್ಣ, ಅಮರೇಶಪ್ಪ ಹೂಗಾರ, ಪಾಮಯ್ಯ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net