ಏ.10ರವರೆಗೆ ಎಡದಂಡೆ ನಾಲೆಗೆ ನೀರು

11032023 sindhanour vijaya sankalapyatre
Published on

ಸಿಂಧನೂರು: ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಹಿತ ಕಾಪಾಡುವುದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆಗೆ ಮಾತನಾಡಿದ್ದು, ಭದ್ರಾ ಜಲಾಶಯದಿಂದ ತುಂಗಭದ್ರಾ ಜಲಾಶಯಕ್ಕೆ ನೀರು ಹರಿಸಲು ನಿರ್ಧರಿಸಲಾಗಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆಗೆ ಚಾಲನೆ ನೀಡಿ ಶನಿವಾರ ಮಾತನಾಡಿದರು. ತುಂಗಭದ್ರಾ ಜಲಾಶಯದಲ್ಲಿ ನೀರಿನ ಕೊರತೆ ಎದುರಾದ ಸಂದರ್ಭದಲ್ಲಿ ಭದ್ರಾ ಜಲಾಶಯದಿಂದ ನೀರು ಕೊಟ್ಟು ಬೆಳೆ ಉಳಿಸಲಾಗಿದೆ. ಈಗಲೂ ರೈತರು ಆತಂಕಪಡುವ ಅಗತ್ಯವಿಲ್ಲ. ಏ.10 ರವರೆಗೆ ತುಂಗಭದ್ರಾ ಎಡದಂಡೆ ನಾಲೆಗೆ ನೀರು ಹರಿದು ಬರುವಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ರಾಯಚೂರು ಜಿಲ್ಲೆಗೆ ಬಿಜೆಪಿ ವಿಶೇಷ ಕೊಡುಗೆ ನೀಡಿದ್ದು, ವಿಮಾನ ನಿಲ್ದಾಣ, ಏತ ನೀರಾವರಿ ಯೋಜನೆ, ಜವಳಿ ಪಾರ್ಕ್ ಆರಂಭಕ್ಕೆ ಕ್ರಮಕೈಗೊಳ್ಳಲಾಗಿದೆ. ರಾಜ್ಯದ ನಾಲ್ಕು ಕಡೆ ನಡೆಯುತ್ತಿರುವ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಎಲ್ಲೆಡೆ ದೊಡ್ಡ ಪ್ರಮಾಣದಲ್ಲಿ ಸ್ಪಂದನೆ ವ್ಯಕ್ತವಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net