

ಸಿಂಧನೂರು: ವಕೀಲರ ಸಂರಕ್ಷಣೆ ಕಾಯ್ದೆ-2024ಕ್ಕೆ ತಿದ್ದುಪಡಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಅಖಿಲ ಭಾರತ ವಕೀಲರ ಒಕ್ಕೂಟದ(ಎಐಎಲ್‌ಯು) ರಾಜ್ಯ ಸಮಿತಿಯ ಸಹಿ ಸಂಗ್ರಹ ಹೋರಾಟವನ್ನು ಬೆಂಬಲಿಸಿ ತಾಲೂಕು ಸಮಿತಿ ಶುಕ್ರವಾರ ತಹಸೀಲ್ದಾರ್ ಅರುಣ್ ದೇಸಾಯಿಗೆ ಮನವಿ ಸಲ್ಲಿಸಿತು.
ಪೊಲೀಸರ ಏಕಪಕ್ಷೀಯ ವರ್ತನೆಯಿಂದ ವಕೀಲರಿಗೆ ರಕ್ಷಣೆ ನೀಡಬೇಕು. ಸರ್ವೋಚ್ಚ ನ್ಯಾಯಾಲಯದ ಮತ್ತು ಉಚ್ಚ ನ್ಯಾಯಾಲದ ಮಾರ್ಗಸೂಚಿಯನ್ನು ಪಾಲಿಸಬೇಕು. ಅವೈಜ್ಞಾನಿಕ ಅಖಿಲ ಭಾರತ ಬಾರ್ ಪರೀಕ್ಷೆ (ಎ.ಐ.ಬಿ.ಇ) ರದ್ದುಪಡಿಬೇಕು. ಕಿರಿಯ ವಕೀಲರಿಗೆ 3 ವರ್ಷಗಳ ಕಾಲ ಮಾಸಿಕ 20 ಸಾವಿರ ರೂಪಾಯಿ ಸಹಾಯಧನ ನೀಡಬೇಕು. ರಾಜ್ಯದ ಎಲ್ಲ ತಾಲೂಕು ವಕೀಲರ ಸಂಘಗಳಿಗೆ ವರ್ಷಕ್ಕೆ ಐದು ಲಕ್ಷ ರೂ.ಅನುದಾನ ಮಂಜೂರು ಮಾಡಬೇಕು ಮತ್ತು ಜಿಲ್ಲಾ ವಕೀಲರ ಸಂಘಗಳಿಗೆ 10 ಲಕ್ಷ ರೂ.ಅನುದಾನ ನೀಡಬೇಕು. ರಾಜ್ಯ ಸರ್ಕಾರ ವಕೀಲರಿಗೆ ಕಡ್ಡಾಯವಾಗಿ ವೈದ್ಯಕೀಯ ಮತ್ತು ಜೀವ ವಿಮಾ ಸೌಲಭ್ಯವನ್ನು ಒದಗಿಸಬೇಕು. ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದಲ್ಲಿ ವಕೀಲರ ಅಕಾಡೆಮಿಗಳನ್ನು ಸ್ಥಾಪಿಸಬೇಕು. ಕರ್ನಾಟಕ ರಾಜ್ಯದಲ್ಲಿ ಹೆಚ್ಚುವರಿ ನ್ಯಾಯಾಲಯಗಳನ್ನು ಸ್ಥಾಪಿಸಬೇಕು ಮುಂದಾಗಬೇಕು. ನ್ಯಾಯಾಲಯದಲ್ಲಿ ಮೂಲಸೌಕರ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.
ತಾಲೂಕು ಸಂಚಾಲಕರಾದ ಎಸ್.ಎಚ್.ಪಿ ಖಾದ್ರಿ, ಪ್ರವೀಣ್‌ಕುಮಾರ ಎಸ್.ಎಂ, ಅಯ್ಯಪ್ಪ ಮಲ್ಲಾಪುರ, ಚಂದ್ರಶೇಖರ, ಅಜುಮ್, ಶರೀಪ್ ರೌಡಕುಂದಾ, ಅಮರೇಗೌಡ, ಸೈಯದ್ ರಬ್ಬಾನಿ ಜಾಗೀರದಾರ ಇತರರಿದ್ದರು.