ಅಶ್ಲೀಲ ವಿಡಿಯೋ ವೈರಲ್ ಆಗಲು ಡಿಕೆಶಿ ಕಾರಣ

VenkataRao Nadagouda
Published on

ಸಿಂಧನೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಬಹಿರಂಗ ಪ್ರಚಾರಕ್ಕಾಗಿ ಮೇ 3 ರಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಗರಕ್ಕೆ ಆಗಮಿಸಲಿದ್ದಾರೆ ಎಂದು ಕೆಒಎಫ್ ಅಧ್ಯಕ್ಷ ವೆಂಕಟರಾವ್ ನಾಡಗೌಡ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಮಧ್ಯಾಹ್ನ 2 ಗಂಟೆಗೆ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು, ಸಮಾವೇಶದಲ್ಲಿ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದರು.

ಅಶ್ಲೀಲ ವೀಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ. ಎಸ್‌ಐಟಿ ತನಿಖೆ ಬಳಿಕ ನಿಜಾಂಶ ಹೊರಬೀಳಲಿದ್ದು, ನಂತರ ನೆಲದ ಕಾನೂನಿಗೆ ಎಲ್ಲರೂ ತಲೆಬಾಗಬೇಕು. ಅಶ್ಲೀಲ ವೀಡಿಯೋ ವೈರಲ್ ಆಗಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾರಣವಾಗಿದ್ದಾರೆ. ಇಂಥ ನೀಚ ರಾಜಕೀಯವನ್ನು ಅವರು ಮಾಡುತ್ತಿರುವುದು ಸರಿಯಲ್ಲ ಎಂದು ಟೀಕಿಸಿದರು.

ಮಾಜಿ ಸಚಿವ ಆಲ್ಕೋಡ್ ಹನುಮಂತಪ್ಪ, ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿಲಕುಮಾರ, ಮುಖಂಡರಾದ ಅಶೋಕಗೌಡ ಗದ್ರಟಗಿ, ಎಸ್.ಬಿ.ಟೇಲರ, ನಗರಸಭೆ ಸದಸ್ಯರಾದ ಚಂದ್ರುಮೈಲಾರ, ಪಿ.ವೀರಭದ್ರಪ್ಪ, ಸುಮಿತ್ ತಡಕಲ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net