25ರಂದು ಸಿಂಧನೂರಿಗೆ ವಿಜಯ ಸಂಕಲ್ಪಯಾತ್ರೆ

K.Virupakshappa
Published on

ಸಿಂಧನೂರು: ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರ ನೇತೃತ್ವದ ವಿಜಯ ಸಂಕಲ್ಪ ಯಾತ್ರೆ ಫೆ.25ರಂದು ನಗರಕ್ಕೆ ಆಗಮಿಸಲಿದೆ ಎಂದು ಕೆಪೆಕ್ ನಿಗಮದ ಅಧ್ಯಕ್ಷ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಹೇಳಿದರು.ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಯಲಿಮಂಚಿಲಿ ವಾಸುದೇವರಾವರಾವ್ ಕಲ್ಯಾಣ ಮಂಟಪದಲ್ಲಿ ಅಂದು ಮಧ್ಯಾಹ್ನ 2.30ಕ್ಕೆ ಸಮಾವೇಶ ನಡೆಯಲಿದೆ. ಪುರಸಭೆ ಮಾಜಿ ಅಧ್ಯಕ್ಷ ಕೆ.ಮರಿಯಪ್ಪ, ವಾಲ್ಮೀಕಿ ನಾಯಕ ಸಮಾಜದ ತಾಲೂಕು ಅಧ್ಯಕ್ಷ ವೆಂಕೋಬ ರಾಮತ್ನಾಳ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದರು.ಮಾರ್ಚ್ 11ರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಭಾಗದ 41 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಥಯಾತ್ರೆ ನಡೆಯಲಿದೆ ಎಂದು ಕೆ.ವಿರೂಪಾಕ್ಷಪ್ಪ ತಿಳಿಸಿದರು.

ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮಧ್ವರಾಜ ಆಚಾರ್ಯ, ಗ್ರಾಮೀಣ ಮಂಡಲ ಅಧ್ಯಕ್ಷ ಹನುಮೇಶ ಸಾಲಗುಂದಾ, ನಗರ ಮಂಡಲ ಅಧ್ಯಕ್ಷ ನಿರುಪಾದೆಪ್ಪ ಜೋಳದರಾಶಿ, ಪ್ರಮುಖರಾದ ರಾಜೇಶ ಹಿರೇಮಠ, ಎನ್.ಶಿವನಗೌಡ ಗೊರೇಬಾಳ, ಈರೇಶ ಇಲ್ಲೂರು, ಪ್ರೇಮಾ ಸಿದ್ದಾಂತಿಮಠ, ಸಹನಾ ಹಿರೇಮಠ, ವೆಂಕನಗೌಡ ಮಲ್ಕಾಪುರ, ಶಿವಬಸನಗೌಡ ಗೊರೇಬಾಳ, ಪರಮೇಶಪ್ಪ ಹಾದಿಮನಿ, ಶಿವರಾಜ ಪಾಟೀಲ್, ರಾಮಕೃಷ್ಣ ಉಪ್ಪಾರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net