ವಿಶ್ವಕರ್ಮರ ಆದರ್ಶ ಮೈಗೂಡಿಸಿಕೊಳ್ಳಿ

17092022 Sindhanoor Vishwakarma Jayanti
Published on

ಸಿಂಧನೂರು: ವಿಶ್ವಕರ್ಮರ ಆದರ್ಶಗಳನ್ನು ನಾವೆಲ್ಲ ಮೈಗೂಡಿಸಿಕೊಳ್ಳಬೇಕೆಂದು ಶಾಸಕ ವೆಂಕಟರಾವ ನಾಡಗೌಡ ಹೇಳಿದರು.

ತಹಸಿಲ್ ಕಚೇರಿಯಲ್ಲಿ ತಾಲೂಕು ಆಡಳಿತ ಶನಿವಾರ ಆಯೋಜಿಸಿದ್ದ ವಿಶ್ವಕರ್ಮ ಜಯಂತಿಯಲ್ಲಿ ಮಾತನಾಡಿ, ಜಯಂತಿ ಆಚರಣೆ ವಿಶ್ವಕರ್ಮ ಸಮುದಾಯವನ್ನು ಜಾಗೃತಿ ಮೂಡಿಸುವ ಉದ್ದೇಶ ಹೊಂದಿದೆ. ಸಮುದಾಯದ ಪಂಚ ಕಸುಬನ್ನು ಜನಪ್ರಿಯಗೊಳಿಸಲು ಮತ್ತು ಕಲಾ ಕೌಶಲ್ಯಗಳನ್ನು ಮುಂದಿನ ಪೀಳಿಗೆಗೆ ನೀಡುವಂತಾಗಬೇಕೆಂದರು.

ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಮಾತನಾಡಿದರು. ತಹಸೀಲ್ದಾರ್ ಅರುಣ ದೇಸಾಯಿ, ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್, ಪೌರಾಯುಕ್ತ ಮಂಜುನಾಥ ಗುಂಡೂರು, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಮಧ್ವರಾಜ ಆಚಾರ್ಯ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ, ಜಿಪಂ ಮಾಜಿ ಸದಸ್ಯ ಎನ್.ಶಿವನಗೌಡ ಗೊರೇಬಾಳ, ಮುಖಂಡ ರಾಜುಗೌಡ ಬಾದರ್ಲಿ, ತಾಲೂಕು ವಿಶ್ವಕರ್ಮ ಸಮುದಾಯ ಅಧ್ಯಕ್ಷ ವೀರಭದ್ರಪ್ಪ ಹಂಚಿನಾಳ, ಲಕ್ಷ್ಮೀ ಪತ್ತಾರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net