ಪ್ರತಿನಿತ್ಯ ಗಿಡಮರಗಳಿಗೂ ನೀರುಣಿಸಿ

25SND-01
ಫೋಟೊ25ಎಸ್‌ಎನ್‌ಡಿ-01 ಸಿಂಧನೂರಿನ ನಗರಸಭೆ ಸಭಾಂಗಣದಲ್ಲಿ ವಿಶ್ವ ಜಲ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಪ್ರಧಾನ ಸಿವಿಲ್ ನ್ಯಾಯಾಧೀಶ ಕೋಟೆಪ್ಪ ಕಾಂಬ್ಳೆ ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿದರು. ಎರಡನೇ ಹೆಚ್ಚುವರಿ ನ್ಯಾಯಾಧೀಶ ಆಚಪ್ಪ ದೊಡ್ಡಬಸವರಾಜ, ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್, ಪೌರಾಯುಕ್ತ ಮಂಜುನಾಥ ಗುಂಡೂರು ಇತರರಿದ್ದರು.
Published on

ಸಿಂಧನೂರು: ಇತ್ತೀಚಿನ ದಿನಗಳಲ್ಲಿ ಪರಿಸರ ನಾಶದಿಂದ ಜಲಮೂಲಗಳು ವಿನಾಶದ ಅಂಚಿಗೆ ಸರಿಯುತ್ತಿವೆ. ಅಂತರ್ ಜಲಗಳು ಸಂಪೂರ್ಣ ಬತ್ತಿ ಹೋಗುತ್ತಿವೆ. ಕುಡಿವ ನೀರನ್ನು ಕೊಂಡುಕೊಳ್ಳುವ ಸ್ಥಿತಿಗೆ ಬಂದಿದ್ದೇವೆ. ನೀರು ಮನುಷ್ಯರ ಜೀವನಕ್ಕೆ ಅತ್ಯಮೂಲ್ಯವಾಗಿದ್ದು ವಿನಾಕಾರಣ ಪೋಲು ಮಾಡದೆ ಅವಶ್ಯಕತೆ ಇದ್ದಷ್ಟು ಮಾತ್ರ ಬಳಸಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಕೋಟೆಪ್ಪ ಕಾಂಬ್ಳೆ ಹೇಳಿದರು.

ಸ್ಥಳೀಯ ನಗರಸಭೆ ಸಭಾಂಗಣದಲ್ಲಿ ಗುರುವಾರ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ಆಡಳಿತ, ನಗರಸಭೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಜಲ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜೀವ ಸಂಕುಲಕ್ಕೆ ಅತ್ಯವಶ್ಯಕವಾಗಿರುವ ನೀರನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಪ್ರತಿನಿತ್ಯ ಮನುಷ್ಯರಂತೆ ಗಿಡಮರಗಳಿಗೂ ನೀರುಣಿಸಬೇಕು. ಅವುಗಳಿಂದ ಶುದ್ಧ ಗಾಳಿ ಬರುತ್ತದೆ. ಇದರಿಂದ ಆಮ್ಲಜನಕದ ಪ್ರಮಾಣ ಹೆಚ್ಚಾಗಿ ಮನುಷ್ಯನಲ್ಲಿ ರೋಗ ನಿರೋಧಕ ಶಕ್ತಿ ಬೆಳೆಯುತ್ತದೆ ಎಂದರು.

ವಿಶ್ವ ಜಲ ದಿನಾಚರಣೆ ಕುರಿತು ಎಸ್.ಎಚ್.ಪಿ. ಖಾದ್ರಿ ವಕೀಲ ವಿಶೇಷ ಉಪನ್ಯಾಸ ನೀಡಿದರು. ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು. ಸ್ಥಾಯಿ ಸಮಿತಿ ಅಧ್ಯಕ್ಷೆ ಲಕ್ಷ್ಮೀ ಭಂಗಿ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಕೆ. ಭೀಮನಗೌಡ, ಖಜಾಂಚಿ ವೀರಭದ್ರಗೌಡ ಸಾಲ್ಗುಂದಾ ಇದ್ದರು. ಮಂಜುನಾಥ ಕೊಟ್ಟೂರುಮಠ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net